ಶ್ರೀ ಸಾಯಿ ಕಾಲೇಜಿನ ಸಾಧಕ ವಿದ್ಯಾರ್ಥಿಗಳಿಗೆ ಆಡಳಿತ ವತಿಯಿಂದ ಸನ್ಮಾನ

Apr 10, 2026 - 17:11
 0  213
ಶ್ರೀ ಸಾಯಿ ಕಾಲೇಜಿನ ಸಾಧಕ ವಿದ್ಯಾರ್ಥಿಗಳಿಗೆ ಆಡಳಿತ ವತಿಯಿಂದ ಸನ್ಮಾನ
ಸುದ್ದಿ ಕಿರಣ ನ್ಯೂಸ್ ಡೆಸ್ಕ್

ಬೇತಮಂಗಲ: ಸ್ಥಳೀಯ ಶ್ರೀ ಸಾಯಿ ಪದವಿ ಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಗಳಿಸಿ ಕಾಲೇಜಿಗೆ ಕೀರ್ತಿ ತಂದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಕಾಲೇಜು ಆಡಳಿತ ಮಂಡಳಿ ವತಿಯಿಂದ ಅದ್ಧೂರಿಯಾಗಿ ಸನ್ಮಾನಿಸಲಾಯಿತು. 

ಕಾಲೇಜು ಆವರಣದಲ್ಲಿ ಹಮ್ಮಿಕೊಂಡಿದ್ದ ಸನ್ಮಾನ ಸಮಾರೋಪ ಕಾರ್ಯಕ್ರಮದಲ್ಲಿ ಮುಖ್ಯ ಅಥಿತಿಯಾಗಿ ಭಾಗವಹಿಸಿದ್ದ ಬೇತಮಂಗಲ ಪೊಲೀಸ್ ವೃತ್ತ ನಿರೀಕ್ಷಕ ರಂಗಶಾಮಯ್ಯ ವಿದ್ಯಾರ್ಥಿಗಳನ್ನು ಅಭಿನಂದಿಸಿ ಮಾತನಾಡಿದರು, ಇದೆ ಕಾಲೇಜಿನ ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿ ಮದನ್ ರಾಜ್ಯಕ್ಕೆ 4ನೇ ಸ್ಥಾನ ಹಾಗೂ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದು ಕಾಲೇಜಿಗೆ ಕೀರ್ತಿ ತಂದಿದ್ದಾರೆ. ವಿದ್ಯಾರ್ಥಿಗಳ ನಿರಂತರ ಪರಿಶ್ರಮ ಮತ್ತು ಉಪನ್ಯಾಸಕರ ಮಾರ್ಗದರ್ಶನದಿಂದ ಕಾಲೇಜಿಗೆ ಉತ್ತಮ ಫಲಿತಾಂಶ ಬಂದಿದೆ. ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಶೈಕ್ಷಣಿಕವಾಗಿ ಮುಂಚೂಣಿಯಲ್ಲಿರುವುದು ಹೆಮ್ಮೆಯ ವಿಷಯ ಎಂದು ಶ್ಲಾಘಿಸಿದರು.

ಈ ವೇಳೆ ಶ್ರೀ ಸಾಯಿ ಕಾಲೇಜಿನ ಸಂಸ್ಥೆಯ ಅಧ್ಯಕ್ಷ ಸತೀಶ್ ರೆಡ್ಡಿ ಮಾತನಾಡಿ, ನಮ್ಮ ಕಾಲೇಜಿನ ವಿದ್ಯಾರ್ಥಿಗಳು ಅತೀ ಹೆಚ್ಚು ಅಂಕಗಳನ್ನು ಪಡೆದಿರುವುದು ಹೆಮ್ಮೆಯ ವಿಷಯ ಅದರಲ್ಲೂ ವಿಜ್ಞಾನ ವಿಭಾಗದ ವಿದ್ಯಾರ್ಥಿ ಮದನ್ ರಾಜ್ಯಕ್ಕೆ 4ನೇ ಸ್ಥಾನ ಜಿಲ್ಲೆಗೆ ಹಾಗೂ ತಾಲ್ಲೂಕಿನ 1 ನೇ ಸ್ಥಾನ ಪಡೆದು ನಮ್ಮ ಕಾಲೇಜಿನ ಕೀರ್ತಿ ಪಥಾಕೆಯನ್ನು ಎತ್ತಿ ಹಾರಿಸಿರುವುದು ಹೆಮ್ಮೆಯ ಸಂಗತಿ ಎಂದು ಶ್ಲಾಘಿಸಿದರು. 

ಪ್ರತಿಭಾವಂತರಿಗೆ ಸನ್ಮಾನ: ಪಿಯುಸಿ ಪರೀಕ್ಷೆಯಲ್ಲಿ ವಿಶಿಷ್ಟ ಶ್ರೇಣಿ ಹಾಗೂ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ನರಾದ ವಿದ್ಯಾರ್ಥಿಗಳಾದ ವಿಜ್ಞಾನ ವಿಭಾಗದಲ್ಲಿ ಮದನ್ 596, ಶ್ರಾವ್ಯ 590 ವಿನಿ 582, ವಾಣಿಜ್ಯ ವಿಭಾಗದಲ್ಲಿ ಪ್ರಿಯಾನಿ 592, ನವ್ಯ 592, ಆಯೇಷಾ ಭಾನು 592, ಲೇಖನ 589, ಆಯೇಷಾ ಖನುಮ್ 583, ಪಲ್ಲವಿ 582, ಭವ್ಯಶ್ರೀ 582, ಈ ಮೇಲಿನ ವಿದ್ಯಾರ್ಥಿಗಳಿಗೆ ಕಾಲೇಜು ಆಡಳಿತವು ಶಾಲು ಹೊದಿಸಿ ಹೂಗುಚ್ಚು ನೀಡುವ ಮೂಲಕ ಸನ್ಮಾನಿಸಿದರು.  

ಪೋಷಕರ ಭಾಗಿ: ಸಾಧಕ ವಿದ್ಯಾರ್ಥಿಗಳ ಪೋಷಕರನ್ನು ಸಹ ವೇದಿಕೆಗೆ ಆಹ್ವಾನಿಸಿ ಕಾಲೇಜು ಆಡಳಿತ ಮಂಡಳಿಯು ಗೌರವಿಸಲಾಯಿತು, 

ಒಂದು ಲಕ್ಷ ಬಹುಮಾನ: ಮುಂದಿನ ಪಿಯುಸಿ ಪರೀಕ್ಷೆಯಲ್ಲಿ 598 ಅಂಕಗಳನ್ನು ಪಡೆದರೆ ಅವರಿಗೆ ಕಾಲೇಜು ವತಿಯಿಂದ ಒಂದು ಲಕ್ಷ ರೂ ನಗದು ಬಹುಮಾನವನ್ನು ವಿತರಿಸುವುದಾಗಿ ತಿಳಿಸಿದರು. 

ಈ ಸಂದರ್ಭದಲ್ಲಿ ಪೊಲೀಸ್ ವೃತ್ತ ನಿರೀಕ್ಷಕ ರಂಗಶ್ಯಾಮಯ್ಯ, ಸಬ್ ಉಪನಿರೀಕ್ಷಿಕ ತ್ಯಾಗರಾಜ್, ಶ್ರೀ ಸಾಯಿ ಕಾಲೇಜಿನ ಸಂಸ್ಥೆಯ ಅಧ್ಯಕ್ಷ ಸತೀಶ್ ರೆಡ್ಡಿ ಕಾರ್ಯದರ್ಶಿ ಧಾಮೋದರ್ ರೆಡ್ಡಿ, ಪ್ರಾಂಶುಪಾಲೆ ತೇಜಸ್ವಿನಿ, ಮಂಜುನಾಥ್ ಹಾಗೂ ಕಾಲೇಜಿನ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. 

ಚಿತ್ರ 01 ಶ್ರೀ ಸಾಯಿ ಕಾಲೇಜಿನ ಸಾಧಕ ವಿದ್ಯಾರ್ಥಿಗಳಿಗೆ ಆಡಳಿತ ವತಿಯಿಂದ ಸನ್ಮಾನ ಮಾಡಲಾಯಿತು,

What's Your Reaction?

Like Like 1
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0
suddikirana ಸುದ್ದಿ ಕಿರಣ ಟಿವಿ ಬಾಳಿನ ಬೆಳಕು ಕರ್ನಾಟಕದ ಮಾಹಿತಿ ಮನರಂಜನಾ ಚಾನೆಲ್ ಆಗಿದೆ. ಇದು ಮನರಂಜನೆಯ ಜೊತೆಗೆ ಇತ್ತೀಚಿನ ಸುದ್ದಿ ಮತ್ತು ಮಾಹಿತಿಯನ್ನು ವೀಕ್ಷಕರಿಗೆ ತೋರುತ್ತಿದೆ. ಮತ್ತು ಸಮಾಜವು ತೆಗೆದುಕೊಳ್ಳುವ ದಿಕ್ಕು ಮಾಹಿತಿಯಿಂದ ಪ್ರಭಾವಿತವಾಗಿರುತ್ತದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ಸುದ್ದಿ ಕಿರಣ ಟಿವಿ ಹಲವು ವಿಷಯಗಳಲ್ಲಿ ಪ್ರವರ್ತಕವಾಗಿದೆ. ಇದು ತನಿಖಾ ಪತ್ರಿಕೋದ್ಯಮ. ಮತ್ತು ತಾಂತ್ರಿಕ ಕೈಗಾರಿಕೆಗಳ ವೃತ್ತಿಪರರಿಂದ ಪ್ರಚಾರ ಮಾಡಲ್ಪಟ್ಟ ಚಾನೆಲ್ ಆಗಿದೆ. ಸುದ್ದಿ ಕಿರಣ ಟಿವಿ ಇತ್ತೀಚಿನ ತಂತ್ರಜ್ಞಾನಗಳೊಂದಿಗೆ ಗುಣಮಟ್ಟದ ಸಂಪನ್ಮೂಲಗಳನ್ನು ಸಂಯೋಜಿಸಲು ಪ್ರಯತ್ನಿಸುತ್ತದೆ. Chief Editor B.S.Mallikarjuna Reddy # 560, 3ನೇ ಮಹಡಿ, 1ನೇ ಮುಖ್ಯ ರಸ್ತೆ, ಯಶವಂತಪುರ ಬೆಂಗಳೂರು-560022., Email: suddikiranatv@gmail.com Email:suddikiranaa@gmail.com www.suddikirana.com ಸುದ್ದಿ ಮತ್ತು ಜಾಹೀರಾತಿಗಳಿಗಾಗಿ ಸಂಪರ್ಕಿಸಿ ಕಛೇರಿ 08041505268 ಸಂಚಾರಿ ವಾಣಿ 9686665456