ಶ್ರೀಕ್ಷೇತ್ರದಿಂದ 20 ಸದಸ್ಯರಿಗೆ ಉಚಿತ ಟೈಲರಿಂಗ್ ತರಬೇತಿ ಕಾರ್ಯಕ್ರಮ

ಶ್ರೀಕ್ಷೇತ್ರದಿಂದ 20 ಸದಸ್ಯರಿಗೆ ಉಚಿತ ಟೈಲರಿಂಗ್ ತರಬೇತಿ ಕಾರ್ಯಕ್ರಮ

ಶ್ರೀಕ್ಷೇತ್ರದಿಂದ 20 ಸದಸ್ಯರಿಗೆ ಉಚಿತ ಟೈಲರಿಂಗ್ ತರಬೇತಿ ಕಾರ್ಯಕ್ರಮ
ಬನ್ನೂರು ತಾಲೂಕಿನ ಸೋಸಲೆ ವಲಯದ ಬೊಮ್ಮನಹಳ್ಳಿಯ ಧರಣಿ ಜ್ಞಾನ ವಿಕಾಸ ಕೇಂದ್ರದ ಸದಸ್ಯರಿಗೆ ಹಮ್ಮಿಕೊಂಡಿದ್ದ ಮೂರು ತಿಂಗಳ ಟೈಲರಿಂಗ್ ತರಬೇತಿಯ ಸಮಾರೋಪ ಕಾರ್ಯಕ್ರಮವನ್ನು ತಾಲೂಕಿನ ಮಾನ್ಯ ಯೋಜನಾಧಿಕಾರಿಗಳಾದ ಶ್ರೀಮತಿ ಉಮಾವತಿ ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು.  ನಂತರ ಮಾತನಾಡುತ್ತಾ ಮಹಿಳೆ ಧೈರ್ಯ ಹಾಗೂ ಆತ್ಮ ವಿಶ್ವಾಸದಿಂದ ಮುನ್ನಡೆದರೆ ಕುಟುಂಬ ಅಭಿವೃದ್ಧಿಯಾಗುತ್ತದೆ. ಅದಕ್ಕಾಗಿ ಮಹಿಳೆಯರು ಸ್ವಉದ್ಯೋಗದಲ್ಲಿ ತನ್ನನ್ನು ತೊಡಗಿಸಿಕೊಳ್ಳಬೇಕು. ಜ್ಞಾನವಿಕಾಸ ಕಾರ್ಯಕ್ರಮದ ಮೂಲಕ ಮಾತೃಶ್ರೀ ಹೇಮಾವತಿ ಅಮ್ಮನವರು ಮಹಿಳೆಯರ ಸಬಲೀಕರಣಕ್ಕೆ ಅನೇಕ ಯೋಜನೆಗಳನ್ನು ರೂಪಿಸಿದ್ದು ಟೈಲರಿಂಗ್ ತರಬೇತಿಯೂ ಒಂದು. ಆದುದರಿಂದ ಟೈಲರಿಂಗ್ ತರಬೇತಿ ಪಡೆದುಕೊಂಡವರು ಸ್ವಉದ್ಯೋಗವನ್ನಾಗಿ ಮಾಡಿಕೊಳ್ಳಬೇಕು. ಎಂದು ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಸದಸ್ಯರಾದ ಮೂರ್ತಿಯವರು ಉಪಸ್ಥಿತರಿದ್ದು ಮೆಚ್ಚುಗೆ ವ್ಯಕ್ತಪಡಿಸಿದರು. ಇದೆ ಸಂದರ್ಭದಲ್ಲಿ ಟೈಲರಿಂಗ್ ತರಬೇತಿಯ ಶಿಕ್ಷಕಿ ಶ್ರೀಮತಿ ನೇತ್ರಾವತಿ, ವಲಯದ ಮೇಲ್ವಿಚಾರಕಿ ಅರ್ಚನಾ, ಜ್ಞಾನ ವಿಕಾಸ ಸಮನ್ವಯಧಿಕಾರಿ ಪ್ರಮೀಳಾ,  ಕೇಂದ್ರದ ಅಧ್ಯಕ್ಷೆ ರೇಖಾ, ಸೇವಾ ಪ್ರತಿನಿಧಿ ಕೋಮಲ ಹಾಗೂ ಸಂಘದ ಸದಸ್ಯರು ಉಪಸ್ಥಿತರಿದ್ದರು.