ಸಂಗನಗೌಡರಿಗೆ ಎಸ್ಪಿಯವರಿಂದ ಪ್ರಶಂಸನಾ ಪತ್ರ

Jan 21, 2026 - 17:50
 0  1
ಸಂಗನಗೌಡರಿಗೆ ಎಸ್ಪಿಯವರಿಂದ ಪ್ರಶಂಸನಾ ಪತ್ರ
ಢವಳಗಿ- ಎಸ್ಪಿ  ಲಕ್ಷ್ಮಣ ನಿಂಬರಗಿ ಅವರು ಸಂಗನಗೌಡ ಬಿರಾದಾರ ಅವರಿಗೆ ಪ್ರಶಂಸನಾ ಪತ್ರ ವಿತರಿಸಿದರು. ಹೆಚ್ಚುವರಿ ಎಸ್ಪಿ ರಾಮನಗೌಡ ಹಟ್ಟಿ, ಡಿಎಸ್ಪಿ ಕಾಂಬಳೆ, ಸಿಪಿಐ ಯಡಣ್ಣನವರ ಇದ್ದಾರೆ.

    ಢವಳಗಿ: ಸಮೀಪದ ವನಹಳ್ಳಿ ಗ್ರಾಮದವರಾಗಿದ್ದು ಮುದ್ದೇಬಿಹಾಳ ಪೊಲೀಸ್ ಠಾಣೆಯಲ್ಲಿ ಸೇವೆ ಸಲ್ಲಿಸಿ ಸಧ್ಯ ವಿಜಯಪುರದ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಮುಖ್ಯ ಪೇದೆಯಾಗಿರುವ ಸಂಗನಗೌಡ ಬಿರಾದಾರ ಇವರಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಅವರು ಪ್ರಶಂಸನಾ ಪತ್ರ ನೀಡಿ ಗೌರವಿಸಿದ್ದಾರೆ. ಇನ್‌ವೆಸ್ಟಮೆಂಟ್ ಫ್ರಾಡ್, ಮಾರ್ಕೇಟಿಂಗ್ ಕಂಪನಿಯ ಫ್ರಾಂಚೈಸಿ ಕೊಡಿಸುವುದಾಗಿ, ಮ್ಯಾಟ್ರಿಮೊನಿಯಲ್ ಫ್ರಾಡ್, ಸರ್ಕಾರದ ನಿಗಮದ ಹಣ ದುರ್ಬಳಕೆ ಇತ್ಯಾದಿಗಳ ಹೆಸರಿನಲ್ಲಿ ವಂಚನೆಗೊಳಗಾದವರು ದೂರು ನೀಡಿದ ಮೇರೆಗೆ ದಾಖಲಾಗಿದ್ದ ಒಟ್ಟು 05 ಸೈಬರ್ ವಂಚನೆ ಪ್ರಕರಣಗಳನ್ನು ಸೈಬ‌ರ್ ಕ್ರೈಂ ಪೊಲೀಸ್ ಠಾಣೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಜನರನ್ನೊಳಗೊಂಡ ತಂಡವು ಯಶಸ್ವಿಯಾಗಿ ಕಾರ್ಯಾಚರಣೆ ನಡೆಸಿ, ಪ್ರಕರಣಗಳನ್ನು ಪತ್ತೆ ಹಚ್ಚಿ ಆರೋಪಿತರ ಬ್ಯಾಂಕ್ ಖಾತೆಗಳಿಂದ ಒಟ್ಟು 1.32 ಕೋಟಿ ಹಣ ಫ್ರೀಜ್ ಮಾಡಿಸಿ, ನ್ಯಾಯಾಲಯದ ಆದೇಶದ ಮೇರೆಗೆ ನೊಂದ ದೂರುದಾರರಿಗೆ ಹಿಂತಿರುಗಿಸುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಿರುತ್ತೀರಿ.

ಇನ್ನು ಮುಂದೆಯೂ ಸಹ ನೀವು ನಿಮ್ಮ ಕರ್ತವ್ಯದಲ್ಲಿ ಇದೇ ರೀತಿ ಪ್ರಾಮಾಣಿಕ ಪ್ರಯತ್ನ ಮಾಡಿ ಇಲಾಖೆಗೆ ಗೌರವ ಹೆಚ್ಚಿಸುತ್ತೀರೆಂದು ಆಶಿಸುತ್ತಾ ಈ ಪ್ರಶಂಸನಾ ಪತ್ರವನ್ನು ನೀಡಲಾಗಿದೆ ಎಂದು ಪತ್ರದಲ್ಲಿ ವಿವರಿಸಲಾಗಿದೆ. ಹೆಚ್ಚುವರಿ ಎಸ್ಪಿ ರಾಮನಗೌಡ ಹಟ್ಟಿ, ಸೈಬರ್ ಕ್ರೈಂ ಠಾಣೆಯ ಡಿಎಸ್ಪಿ ಕಾಂಬಳೆ, ಸಿಪಿಐ ಯಡಣ್ಣನವರ್ ಹಾಗೂ ಠಾಣೆಯ ಸಿಬ್ಬಂದಿ ಪ್ರಶಂಸನಾ ಪತ್ರ ನೀಡುವ ಸಂದರ್ಭ ಉಪಸ್ಥಿತರಿದ್ದರು.

ಸಂಗನಗೌಡರು ಮುದ್ದೇಬಿಹಾಳ ಠಾಣೆಯಲ್ಲಿ ಕರ್ತವ್ಯದಲ್ಲಿದ್ದಾಗ ಠಾಣೆಯ ಆವರಣದಲ್ಲಿ ಸುಂದರವಾದ ಉದ್ಯಾನವನ ನಿರ್ಮಿಸಲು ಕಾರಣಿಕರ್ತರಾಗಿ ಪೊಲೀಸ್ ಅಧಿಕಾರಿಗಳು ಮತ್ತು ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾಗಿದ್ದರು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0
suddikirana ಸುದ್ದಿ ಕಿರಣ ಟಿವಿ ಬಾಳಿನ ಬೆಳಕು ಕರ್ನಾಟಕದ ಮಾಹಿತಿ ಮನರಂಜನಾ ಚಾನೆಲ್ ಆಗಿದೆ. ಇದು ಮನರಂಜನೆಯ ಜೊತೆಗೆ ಇತ್ತೀಚಿನ ಸುದ್ದಿ ಮತ್ತು ಮಾಹಿತಿಯನ್ನು ವೀಕ್ಷಕರಿಗೆ ತೋರುತ್ತಿದೆ. ಮತ್ತು ಸಮಾಜವು ತೆಗೆದುಕೊಳ್ಳುವ ದಿಕ್ಕು ಮಾಹಿತಿಯಿಂದ ಪ್ರಭಾವಿತವಾಗಿರುತ್ತದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ಸುದ್ದಿ ಕಿರಣ ಟಿವಿ ಹಲವು ವಿಷಯಗಳಲ್ಲಿ ಪ್ರವರ್ತಕವಾಗಿದೆ. ಇದು ತನಿಖಾ ಪತ್ರಿಕೋದ್ಯಮ. ಮತ್ತು ತಾಂತ್ರಿಕ ಕೈಗಾರಿಕೆಗಳ ವೃತ್ತಿಪರರಿಂದ ಪ್ರಚಾರ ಮಾಡಲ್ಪಟ್ಟ ಚಾನೆಲ್ ಆಗಿದೆ. ಸುದ್ದಿ ಕಿರಣ ಟಿವಿ ಇತ್ತೀಚಿನ ತಂತ್ರಜ್ಞಾನಗಳೊಂದಿಗೆ ಗುಣಮಟ್ಟದ ಸಂಪನ್ಮೂಲಗಳನ್ನು ಸಂಯೋಜಿಸಲು ಪ್ರಯತ್ನಿಸುತ್ತದೆ. Chief Editor B.S.Mallikarjuna Reddy # 560, 3ನೇ ಮಹಡಿ, 1ನೇ ಮುಖ್ಯ ರಸ್ತೆ, ಯಶವಂತಪುರ ಬೆಂಗಳೂರು-560022., Email: suddikiranatv@gmail.com Email:suddikiranaa@gmail.com www.suddikirana.com ಸುದ್ದಿ ಮತ್ತು ಜಾಹೀರಾತಿಗಳಿಗಾಗಿ ಸಂಪರ್ಕಿಸಿ ಕಛೇರಿ 08041505268 ಸಂಚಾರಿ ವಾಣಿ 9686665456