ಸಂಗೀತ ನೃತ್ಯ ಕಲಾವಿದರ ಸಂಘದ ಮಹಾಸಭೆ

Apr 4, 2026 - 14:22
 0  1
ಸಂಗೀತ ನೃತ್ಯ ಕಲಾವಿದರ ಸಂಘದ ಮಹಾಸಭೆ

        ಬೆಂಗಳೂರು: ಸಂಗೀತ ನೃತ್ಯ ಕಲಾವಿದರ ಸಂಘದ  ಅಧ್ಯಕ್ಷ ಶ್ರೀ ಸಾಯಿನಾರಾಯಣ ಕಲ್ಮಡ್ಕ ಅವರ ಅಧ್ಯಕ್ಷತೆಯಲ್ಲಿ ಬೆಂಗಳೂರಿನ ಕೆಂಗೇರಿ ಶ್ರೀ ಗುರುರಾಜ ಭವನದಲ್ಲಿ ಇತ್ತೀಚೆಗೆ ನಡೆಯಿತು. ಉಪಾಧ್ಯಕ್ಷೆ ಶ್ರೀಮತಿ ಶಾಲಿನಿ ಶ್ರೀಕಾಂತ್ ಅವರು ಉಪಸ್ಥಿತರಿದ್ದರು. ಸಂಘದ ಪ್ರಧಾನ ಕಾರ್ಯದರ್ಶಿ ವಿದ್ವಾನ್ ಸಂಜೀವ್ ಕುಮಾರ್ ಅವರಿಂದ ಹಾಗೂ ದೇಶದ ನಾನಾ ಸಂಚಾಲಕರುಗಳಿಂದ ವರದಿವಾಚನ ನಡೆಯಿತು.
ಹಿರಿಯ ವೀಣಾ ಕಲಾವಿದೆ ವಿದುಷಿ ಶ್ರೀಮತಿ ಉಷಾ ರಾಮಮೂರ್ತಿ ಅವರನ್ನು ಅಖಿಲ ಭಾರತೀಯ ಸಂಗೀತ ಪುರಸ್ಕಾರ ನೀಡಿ ಗೌರವಿಸಲಾಯಿತು.
ಸಂಗೀತ ನೃತ್ಯ ಕಲಾವಿದರ ಏಳಿಗೆಗಾಗಿ ಒಗ್ಗಟ್ಟಿನಿಂದ ಶ್ರಮಿಸುವುದೆಂದು ಮಹಾಸಭೆಯಲ್ಲಿ ತೀರ್ಮಾನಿಸಲಾಯಿತು.
ಒಕ್ಕೂಟದಿಂದ ನಡೆಯುವ ಆನ್ಲೈನ್ ಸಂಗೀತ ನೃತ್ಯ ಸ್ಪರ್ಧಾ ವಿಜೇತರುಗಳಿಗೆ ಬಹುಮಾನ ವಿತರಿಸಲಾಯಿತು.
ಸಂಘದ ಮೂಲಕ ಅಯೋಧ್ಯೆ ಕಾಶೀ ದೇವಾಲಯಗಳಲ್ಲಿ ನಡೆಯುತ್ತಿರುವ ಸಾಪ್ತಾಹಿಕ ಸರಣಿ ಕಾರ್ಯಕ್ರಮಗಳನ್ನು ನೀಡಿದ ಕಲಾವಿದರನ್ನು ಅಭಿನಂದಿಸಲಾಯಿತು.
ಅಧ್ಯಕ್ಷರ ಅನುಮತಿ ಮೇರೆಗೆ ಇತರ ವಿಚಾರಗಳಲ್ಲಿ ಕಲಾವಿದರುಗಳಿಗೆ ಆಗುತ್ತಿರುವ ವಿವಿಧ ಸಮಸ್ಯೆಗಳನ್ನು ಒಕ್ಕೂಟದ ಮೂಲಕ ಎದುರಿಸುವ ಕುರಿತು ಕೂಲಂಕುಷವಾಗಿ ಚರ್ಚಿಸಲಾಯಿತು.
ಸಂಘದ ಮೂಲಕ ವಿಶ್ವಸಂಗೀತ ನೃತ್ಯ ಸಮ್ಮೇಳನವನ್ನು ನಡೆಸುವುದರ ಮೂಲಕ ಜಗತ್ತಿಗೆ ಭಾರತೀಯ ಕಲೆಗಳ ವಿರಾಟ್ ಪ್ರದರ್ಶನವನ್ನು ಹಾಗೂ ಒಗ್ಗಟ್ಟನ್ನು ಪ್ರದರ್ಶಿಸುವುದು ಎಂದು ಸರ್ವಾನುಮತದಿಂದ ತೀರ್ಮಾನಿಸಲಾಯಿತು. ಈ ಸಂದರ್ಭದಲ್ಲಿ
ಮೈಸೂರು ವಿಭಾಗದ ನೂತನ ಅಧ್ಯಕ್ಷರಾದ ಡಾ. ಚಿತ್ರ ಬಿಳಿಗಿರಿ ಅವರನ್ನು ಅಭಿನಂದಿಸಲಾಯಿತು. ಹಾಗೂ ನೂತನ ಪದಾಧಿಕಾರಿಗಳ ಪರಿಚಯ ನೀಡಲಾಯಿತು. ಸಂಘದ ಅಧ್ಯಕ್ಷ ಸಾಯಿನಾರಾಯಣ ಕಲ್ಮಡ್ಕ ಮಾತನಾಡಿ ಕಲೆ ಕಲಾವಿದರ ಹಕ್ಕು ಇವುಗಳ ಉಳಿವಿಗಾಗಿ ಬೆಳವಣಿಗೆಗಾಗಿ ಸರ್ವರ ಸಹಕಾರವನ್ನೂ ಯಾಚಿಸಿದರು.
ಹಾಗೂ ಬೆಟ್ಟ ವೆಂಕಟೇಶ್ ಅವರ ವಂದಾನರ್ಪಣೆಯೊಂದಿಗೆ ಮಹಾಸಭೆ ಮುಕ್ತಾಯಗೊಂಡಿತು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0
suddikirana ಸುದ್ದಿ ಕಿರಣ ಟಿವಿ ಬಾಳಿನ ಬೆಳಕು ಕರ್ನಾಟಕದ ಮಾಹಿತಿ ಮನರಂಜನಾ ಚಾನೆಲ್ ಆಗಿದೆ. ಇದು ಮನರಂಜನೆಯ ಜೊತೆಗೆ ಇತ್ತೀಚಿನ ಸುದ್ದಿ ಮತ್ತು ಮಾಹಿತಿಯನ್ನು ವೀಕ್ಷಕರಿಗೆ ತೋರುತ್ತಿದೆ. ಮತ್ತು ಸಮಾಜವು ತೆಗೆದುಕೊಳ್ಳುವ ದಿಕ್ಕು ಮಾಹಿತಿಯಿಂದ ಪ್ರಭಾವಿತವಾಗಿರುತ್ತದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ಸುದ್ದಿ ಕಿರಣ ಟಿವಿ ಹಲವು ವಿಷಯಗಳಲ್ಲಿ ಪ್ರವರ್ತಕವಾಗಿದೆ. ಇದು ತನಿಖಾ ಪತ್ರಿಕೋದ್ಯಮ. ಮತ್ತು ತಾಂತ್ರಿಕ ಕೈಗಾರಿಕೆಗಳ ವೃತ್ತಿಪರರಿಂದ ಪ್ರಚಾರ ಮಾಡಲ್ಪಟ್ಟ ಚಾನೆಲ್ ಆಗಿದೆ. ಸುದ್ದಿ ಕಿರಣ ಟಿವಿ ಇತ್ತೀಚಿನ ತಂತ್ರಜ್ಞಾನಗಳೊಂದಿಗೆ ಗುಣಮಟ್ಟದ ಸಂಪನ್ಮೂಲಗಳನ್ನು ಸಂಯೋಜಿಸಲು ಪ್ರಯತ್ನಿಸುತ್ತದೆ. Chief Editor B.S.Mallikarjuna Reddy # 560, 3ನೇ ಮಹಡಿ, 1ನೇ ಮುಖ್ಯ ರಸ್ತೆ, ಯಶವಂತಪುರ ಬೆಂಗಳೂರು-560022., Email: suddikiranatv@gmail.com Email:suddikiranaa@gmail.com www.suddikirana.com ಸುದ್ದಿ ಮತ್ತು ಜಾಹೀರಾತಿಗಳಿಗಾಗಿ ಸಂಪರ್ಕಿಸಿ ಕಛೇರಿ 08041505268 ಸಂಚಾರಿ ವಾಣಿ 9686665456