ಸಮ್ಮೇಳನ ಅಧ್ಯಕ್ಷರಿಗೆ ಅಧಿಕೃತ ಆಹ್ವಾನ

ಹಾಸನ : ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ ಹಾಸನ ತಾಲೂಕು ಘಟಕದ ವತಿಯಿಂದ 2026 ನವಂಬರ್ 22 ಭಾನುವಾರ ನಗರದ ಗಾಂಧಿ ಭವನದಲ್ಲಿ ಹಮ್ಮಿಕೊಂಡಿರುವ ಹಾಸನ ತಾಲೂಕು ದ್ವಿತೀಯ ಕೇಂದ್ರ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆಯಾಗಿರುವ ಹಿರಿಯ ಸಾಹಿತಿಗಳಾದ ಹರಿಹರಪುರ ಶ್ರೀಧರ್ ಅವರನ್ನು ತಾಲೂಕು ಘಟಕದ ವತಿಯಿಂದ ಆತ್ಮೀಯವಾಗಿ ಆಹ್ವಾನ ನೀಡಲಾಯಿತು.

ಈ ಸಂದರ್ಭದಲ್ಲಿ ಕೇಂದ್ರ ಕನ್ನಡ ಸಾಹಿತ್ಯ ವೇದಿಕೆಯ ರಾಜ್ಯಾಧ್ಯಕ್ಷ ಕೊಟ್ರೇಶ್ ಎಸ್. ಉಪ್ಪಾರ್, ಹಾಸನ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಗೌರವಾಧ್ಯಕ್ಷ ರವಿ ನಾಗಲಗೂಡು,  ಜಿಲ್ಲಾ ಉಪಾಧ್ಯಕ್ಷೆ ಎಚ್. ಎಸ್. ಭಾನುಮತಿ, ತಾಲೂಕು ಘಟಕದ ಅಧ್ಯಕ್ಷೆ ಕೆ.ಸಿ. ಗೀತಾ, ಉಪಾಧ್ಯಕ್ಷ ವಿ.  ಮೋಹನ್, ಮಹಿಳಾ ಕಾರ್ಯದರ್ಶಿ ಪದ್ಮಾವತಿ ವೆಂಕಟೇಶ್, ಬೆಳ್ಳಿತೆರೆ ಹಾಗೂ ರಂಗಭೂಮಿ ಕಲಾವಿದೆ ಪೂಜಾ ರಘುನಂದನ್, ಪತ್ರಕರ್ತ ರಘುನಂದನ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.