ಸರ್ಕಾರದಿಂದ ಭಗವಾನ್ ಬುದ್ದ ಜಯಂತಿ ಆಚರಣೆ : ಕೃತಜ್ಞತೆ ಸಲ್ಲಿಕೆ

May 6, 2025 - 18:25
 0  5
ಸರ್ಕಾರದಿಂದ ಭಗವಾನ್ ಬುದ್ದ ಜಯಂತಿ ಆಚರಣೆ : ಕೃತಜ್ಞತೆ ಸಲ್ಲಿಕೆ

ಕೆಜಿಎಫ್., ಮೇ. ೦೬: ಭಗವಾನ್ ಬುದ್ದರ ಜಯಂತಿಯನ್ನು ಪ್ರತಿ ವರ್ಷ ಬುದ್ದ ಪೌರ್ಣಿಮೆಯಂದು ರಾಜ್ಯಾದ್ಯಂತ ಸರ್ಕಾರದ ವತಿಯಿಂದ ಆಚರಿಸಲು ಸರ್ಕಾರವು ಆದೇಶಿಸಿರುವುದಕ್ಕೆ ಅಶೋಕ ದಮ್ಮ ದೂತ ಬುದ್ಧ ಸಂಘದ ಅಧ್ಯಕ್ಷ ಪೂಜ್ಯ ಬಿಕ್ಕು ಬುದ್ದ ದತ್ತ  ರವರು ಕೃತಜ್ಞತೆ ಸಲ್ಲಿಸಿದ್ದಾರೆ.
ಮಹಾವೀರ, ಕನಕದಾಸರು ಮುಂತಾದ ಮಹಾತ್ಮ ದಾರ್ಶನಿಕರ ಜಯಂತಿಗಳನ್ನು ರಾಷ್ಟ್ರೀಯ ಹಬ್ಬಗಳ ಪಟ್ಟಿಯಲ್ಲಿ ಸೇರ್ಪಡೆ ಮಾಡಿ ಅವುಗಳ ಆಚರಣೆಯನ್ನು ಸರ್ಕಾರವು ಜಾರಿಗೆ ತಂದಿದ್ದು, ವಿಶ್ವದ ಪ್ರಥಮ ಹಾಗೂ ಶ್ರೇಷ್ಠ ದಾರ್ಶನಿಕರಾದ ಬುದ್ದರ ಜಯಂತಿಯನ್ನು ಅವರು ಜನಿಸಿದ ಭಾರತದಲ್ಲಿ ಅದರಲ್ಲೂ ಕರ್ನಾಟಕದಲ್ಲಿ ಸರ್ಕಾರದ ವತಿಯಿಂದ ಆಚರಿಸುವುದು ಸೂಕ್ತ ಎಂದು ತಿಳಿಸುತ್ತಾ, ಭಗವಾನ್ ಬುದ್ದರ ಜಯಂತಿಯನ್ನು ಪ್ರತಿ ವರ್ಷ ಬುದ್ದ ಪೌರ್ಣಿಮೆಯಂದು ರಾಜ್ಯಾದ್ಯಂತ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಆಚರಿಸಲು ಸರ್ಕಾರವು ಆದೇಶಿಸಿದೆ.
ಈ ಹಿನ್ನೆಲೆಯಲ್ಲಿ ಭಗವಾನ್ ಬುದ್ದ ಜಯಂತಿಯನ್ನು ಸರ್ಕಾರದ ಕಾರ್ಯಕ್ರಮವನ್ನಾಗಿ ರಾಜ್ಯಾದ್ಯಂತ ಆಚರಿಸಲು ಆದೇಶ ಹೊರಡಿಸಿದ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅಶೋಕ ದಮ್ಮ ದೂತ ಬುದ್ಧ ಸಂಘದ ಅಧ್ಯಕ್ಷ ಪೂಜ್ಯ ಬಿಕ್ಕು ಬುದ್ದ ದತ್ತ  ರವರು ಕೃತಜ್ಞತೆ ಸಲ್ಲಿಸಿದ್ದಾರೆ.
ಚಿತ್ರಶೀರ್ಷಿಕೆ: ೦೬ಕೆಜಿಎಫ್೦೧: ಅಶೋಕ ದಮ್ಮ ದೂತ ಬುದ್ಧ ಸಂಘದ ಅಧ್ಯಕ್ಷ ಪೂಜ್ಯ ಬಿಕ್ಕು ಬುದ್ದ ದತ್ತ.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0
suddikirana ಸುದ್ದಿ ಕಿರಣ ಟಿವಿ ಬಾಳಿನ ಬೆಳಕು ಕರ್ನಾಟಕದ ಮಾಹಿತಿ ಮನರಂಜನಾ ಚಾನೆಲ್ ಆಗಿದೆ. ಇದು ಮನರಂಜನೆಯ ಜೊತೆಗೆ ಇತ್ತೀಚಿನ ಸುದ್ದಿ ಮತ್ತು ಮಾಹಿತಿಯನ್ನು ವೀಕ್ಷಕರಿಗೆ ತೋರುತ್ತಿದೆ. ಮತ್ತು ಸಮಾಜವು ತೆಗೆದುಕೊಳ್ಳುವ ದಿಕ್ಕು ಮಾಹಿತಿಯಿಂದ ಪ್ರಭಾವಿತವಾಗಿರುತ್ತದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ಸುದ್ದಿ ಕಿರಣ ಟಿವಿ ಹಲವು ವಿಷಯಗಳಲ್ಲಿ ಪ್ರವರ್ತಕವಾಗಿದೆ. ಇದು ತನಿಖಾ ಪತ್ರಿಕೋದ್ಯಮ. ಮತ್ತು ತಾಂತ್ರಿಕ ಕೈಗಾರಿಕೆಗಳ ವೃತ್ತಿಪರರಿಂದ ಪ್ರಚಾರ ಮಾಡಲ್ಪಟ್ಟ ಚಾನೆಲ್ ಆಗಿದೆ. ಸುದ್ದಿ ಕಿರಣ ಟಿವಿ ಇತ್ತೀಚಿನ ತಂತ್ರಜ್ಞಾನಗಳೊಂದಿಗೆ ಗುಣಮಟ್ಟದ ಸಂಪನ್ಮೂಲಗಳನ್ನು ಸಂಯೋಜಿಸಲು ಪ್ರಯತ್ನಿಸುತ್ತದೆ. Chief Editor B.S.Mallikarjuna Reddy # 560, 3ನೇ ಮಹಡಿ, 1ನೇ ಮುಖ್ಯ ರಸ್ತೆ, ಯಶವಂತಪುರ ಬೆಂಗಳೂರು-560022., Email: suddikiranatv@gmail.com Email:suddikiranaa@gmail.com www.suddikirana.com ಸುದ್ದಿ ಮತ್ತು ಜಾಹೀರಾತಿಗಳಿಗಾಗಿ ಸಂಪರ್ಕಿಸಿ ಕಛೇರಿ 08041505268 ಸಂಚಾರಿ ವಾಣಿ 9686665456