ಸರ್ಕಾರಿ ನಿವೃತ್ತ ನೌಕರರಿಂದ ಅಪ್ಪು ಪಟ್ಟಿ ಧರಿಸಿ ಪ್ರತಿಭಟನೆ ಮನವಿ
ಕೆಜಿಎಫ್: ಕೇಂದ್ರ ಸರ್ಕಾರ ನಿವೃತ್ತ ನೌಕರರಿಗೆ ನೀಡುವ ಸೌಲಭ್ಯಗಳನ್ನು ಕಡಿತಗೊಳಿಸುವುದಾಗಿ ಇತ್ತೀಚೆಗೆ ಸದನದಲ್ಲಿ ಕೇಂದ್ರ ಹಣಕಾಸು ಸಚಿವೆ. ನಿರ್ಮಲ ಸೀತಾರಾಮನ್ ತಿಳಿಸಿದರು.
ಈ ನಿರ್ಧಾರವನ್ನು ಹಿಂಪಡೆಯಬೇಕೆಂದು ದೇಶ ವ್ಯಾಪಿ ಸರ್ಕಾರಿ ನಿವೃತ್ತ ನೌಕರರು ಕಪ್ಪು ಪಟ್ಟಿ ಧರಿಸಿ ಬೃಹತ್ ಪ್ರತಿಭಟನೆ ಮಾಡುವ ಮೂಲಕ ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿಗಳಿಗೆ ನಮ್ಮ ಸರ್ಕಾರಿ ನಿವೃತ್ತ ನೌಕರರಿಗೆ ನೀಡುತ್ತಿರುವ ಸೌಲಭ್ಯಗಳು ಯಥಾವತ್ತಾಗಿ ಮುಂದುವರೆಯಬೇಕು ಎಂದು ಒತ್ತಾಯಿಸಿ. ಕೆಜಿಎಫ್ ತಾಲೂಕು ಕಚೇರಿ ಮುಂಭಾಗ ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘದ ತಾಲೂಕು ಅಧ್ಯಕ್ಷರು. ವೀರ ವೆಂಕಟಪ್ಪ ನೇತ್ರತ್ವದಲ್ಲಿ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ ಮಾಡುವ ಮೂಲಕ ತಹಶೀಲ್ದಾರ್ ಮುಖಾಂತರ ತಮ್ಮ ಮನವಿಯನ್ನು ನೀಡಿದರು.
ನಿವೃತ್ತ ಸರ್ಕಾರಿ ನೌಕರರಿಗೆ ಕೇಂದ್ರ ಸರ್ಕಾರದ ರಾಜ್ಯ ಸರ್ಕಾರದಿಂದ ಯಾವುದೇ ತೊಂದರೆಗಳು ಮಾಡಬಾರದು. ಇದು ಹೀಗೆ ಮುಂದೆವರೆದರೆ ಮುಂದಿನ ದಿನಗಳಲ್ಲಿ ಮತ್ತಷ್ಟು ಉಗ್ರ ಪ್ರತಿಭಟನೆ ಮಾಡೋದಾಗಿ ಎಚ್ಚರಿಸಿದರು. ಈ ಸಂದರ್ಭದಲ್ಲಿ ಸರಕಾರಿ ನಿವೃತ್ತ ನೌಕರರ ಸಂಘದ ಮುಖಂಡರಾದ.ಶ್ರೀನಿವಾಸ ರೆಡ್ಡಿ. ರಂಗಮ್ಮ ನಾಯ್ಡು. ನಾಗರಾಜ್. ಕೃಷ್ಣಪ್ಪ ಮತ್ತಿತರರು ಇದ್ದರು.
What's Your Reaction?
Like
2
Dislike
0
Love
0
Funny
0
Angry
0
Sad
0
Wow
0
