ಸರ್ಕಾರಿ ಶಾಲೆ ಪ್ರಾರಂಭೋತ್ಸವ ಕಾರ್ಯಕ್ರಮ

May 30, 2025 - 17:26
 0  67
ಸರ್ಕಾರಿ ಶಾಲೆ ಪ್ರಾರಂಭೋತ್ಸವ ಕಾರ್ಯಕ್ರಮ

ಕೆಜಿಎಫ್: ನಗರದ ಲೋಯರ್ ಮಸ್ಕಂ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ ನಡೆಯಿತು. ಶಾಲೆಯನ್ನು ಮಾವಿನ ಎಲೆಯ ತೋರಣಗಳಿಂದ ವಿಶೇಷ ಹೂವುಗಳಿಂದ ಅಲಂಕರಿಸಲಾಗಿತ್ತು .ಮಕ್ಕಳಿಗೆ ವಿಶೇಷವಾಗಿ ಗುಲಾಬಿ ಹೂವು ನೀಡುವ ಮೂಲಕ ಶಾಲೆಗೆ ಸ್ವಾಗತಿಸಲಾಯಿತು. ಮಕ್ಕಳು  ನಗುನಗುತ್ತಾ ಶಾಲೆಗೆ ಪ್ರವೇಶ ನೀಡಿದರು. ಮೊದಲ ದಿನವೇ ಮಕ್ಕಳಿಗೆ ಉಚಿತ ನೋಟ್ ಪುಸ್ತಕಗಳನ್ನು ನೀಡಲಾಯಿತು. ಹಬ್ಬದ ಊಟವನ್ನು ಬಡಿಸಲಾಯಿತು. ನಂತರ ಮಾತನಾಡಿದ ಮುಖ್ಯ ಶಿಕ್ಷಕರು ಎಮ್. ಶ್ರೀನಿವಾಸ್. ಸರ್ಕಾರಿ ಶಾಲೆಯಲ್ಲಿ ಎಲ್ಲಾ ರೀತಿಯ ಸೌಲಭ್ಯಗಳು ದೊರೆಯುತ್ತದೆ. ಮಕ್ಕಳಿಗೆ ನೋಟ್ ಪುಸ್ತಕ. ಶೂ ವಿತರಣೆ ಬ್ಯಾಗ್ ವಿತರಣೆ. ಸಮವಸ್ತ್ರ ವಿತರಣೆ. ಊಟದ ವ್ಯವಸ್ಥೆ. ನುರಿತ ಶಿಕ್ಷಕರಿಂದ ಗುಣಮಟ್ಟದ ಶಿಕ್ಷಣ ನೀಡುವುದು. ಮಕ್ಕಳನ್ನು ತಾಲೂಕು ಮಟ್ಟದಲ್ಲಿ ಕ್ರೀಡೆಯಲ್ಲಿ ಉತ್ತೇಜನ ನೀಡುವುದು. ಮಕ್ಕಳಿಗೆ ಪ್ರತ್ಯೇಕ ಶೌಚಾಲಯ ಕುಡಿಯುವ ನೀರಿನ ವ್ಯವಸ್ಥೆ ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಈ ರೀತಿಯಾಗಿ ನಾನಾ ಕಾರ್ಯಕ್ರಮಗಳನ್ನು ನಮ್ಮ ಸರ್ಕಾರಿ ಶಾಲೆಯಲ್ಲಿ ಲಭ್ಯವಾಗುತ್ತದೆ. ಇದನ್ನು ಸಾರ್ವಜನಿಕರು ಬಳಸಿಕೊಳ್ಳಬೇಕು. ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸುವ ಮೂಲಕ ಸರ್ಕಾರಿ ಶಾಲೆಗಳನ್ನು ಉಳಿಸಬೇಕು ಬೆಳೆಸಬೇಕು. ಈ ವರ್ಷದಿಂದ ವಿಶೇಷವಾಗಿ ಇಂಗ್ಲಿಷ್ ಮಾಧ್ಯಮವನ್ನು ಪ್ರಾರಂಭಿಸಲಾಗುತ್ತದೆ. ಇದನ್ನು ಸದ್ಬಳಕೆ ಮಾಡಿಕೊಳ್ಳಬೇಕೆಂದು ಪೋಷಕರಲ್ಲಿ ಕಳಕಳಿಯ ಮನವಿ ಮಾಡಿದರು. ಈ ಸಂದರ್ಭದಲ್ಲಿ ಶಾಲೆಯ ಶಿಕ್ಷಕರು ಉಷಾರಾಣಿ. ನಳಿನಾಕ್ಷಿ. ಸುಜಾತಾ. ಮಮತಾ. ವೆಂಕಟ ಲಕ್ಷ್ಮಿ. ಅಡುಗೆ ಸಿಬ್ಬಂದಿ ಕೃಷ್ಣವೇಣಿ.ಸುನಂದಮ್ಮ. ಪಾರ್ವತಿ. ಎಸ್ ಡಿ ಎಂ ಸಿ ಸದಸ್ಯರು ಹಾಗೂ ಪೋಷಕರು. ಹಾಜರಿದ್ದರು

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0
suddikirana ಸುದ್ದಿ ಕಿರಣ ಟಿವಿ ಬಾಳಿನ ಬೆಳಕು ಕರ್ನಾಟಕದ ಮಾಹಿತಿ ಮನರಂಜನಾ ಚಾನೆಲ್ ಆಗಿದೆ. ಇದು ಮನರಂಜನೆಯ ಜೊತೆಗೆ ಇತ್ತೀಚಿನ ಸುದ್ದಿ ಮತ್ತು ಮಾಹಿತಿಯನ್ನು ವೀಕ್ಷಕರಿಗೆ ತೋರುತ್ತಿದೆ. ಮತ್ತು ಸಮಾಜವು ತೆಗೆದುಕೊಳ್ಳುವ ದಿಕ್ಕು ಮಾಹಿತಿಯಿಂದ ಪ್ರಭಾವಿತವಾಗಿರುತ್ತದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ಸುದ್ದಿ ಕಿರಣ ಟಿವಿ ಹಲವು ವಿಷಯಗಳಲ್ಲಿ ಪ್ರವರ್ತಕವಾಗಿದೆ. ಇದು ತನಿಖಾ ಪತ್ರಿಕೋದ್ಯಮ. ಮತ್ತು ತಾಂತ್ರಿಕ ಕೈಗಾರಿಕೆಗಳ ವೃತ್ತಿಪರರಿಂದ ಪ್ರಚಾರ ಮಾಡಲ್ಪಟ್ಟ ಚಾನೆಲ್ ಆಗಿದೆ. ಸುದ್ದಿ ಕಿರಣ ಟಿವಿ ಇತ್ತೀಚಿನ ತಂತ್ರಜ್ಞಾನಗಳೊಂದಿಗೆ ಗುಣಮಟ್ಟದ ಸಂಪನ್ಮೂಲಗಳನ್ನು ಸಂಯೋಜಿಸಲು ಪ್ರಯತ್ನಿಸುತ್ತದೆ. Chief Editor B.S.Mallikarjuna Reddy # 560, 3ನೇ ಮಹಡಿ, 1ನೇ ಮುಖ್ಯ ರಸ್ತೆ, ಯಶವಂತಪುರ ಬೆಂಗಳೂರು-560022., Email: suddikiranatv@gmail.com Email:suddikiranaa@gmail.com www.suddikirana.com ಸುದ್ದಿ ಮತ್ತು ಜಾಹೀರಾತಿಗಳಿಗಾಗಿ ಸಂಪರ್ಕಿಸಿ ಕಛೇರಿ 08041505268 ಸಂಚಾರಿ ವಾಣಿ 9686665456