ಸೆಹಾಗಲ್ ಫೌಂಡೇಶನ್ ಮತ್ತು ಕೋಕಾ ಕೋಲಾ ಫೌಂಡೇಶನ್ ವತಿಯಿಂದ ಸರ್ಕಾರಿ ಶಾಲೆಗೆ ವಿವಿಧ ಸೌಲಭ್ಯ

Jul 16, 2025 - 18:14
 0  4
ಸೆಹಾಗಲ್ ಫೌಂಡೇಶನ್ ಮತ್ತು ಕೋಕಾ ಕೋಲಾ ಫೌಂಡೇಶನ್ ವತಿಯಿಂದ ಸರ್ಕಾರಿ ಶಾಲೆಗೆ ವಿವಿಧ ಸೌಲಭ್ಯ

ಕೆಜಿಎಫ್: ಕೆಜಿಎಫ್ ತಾಲ್ಲೂಕು ಕ್ಯಾಸಂಬಳ್ಳಿ ಗ್ರಾಮ ಪಂಚಾಯಿತಿ ಮಡಿವಾಳ ಗ್ರಾಮದ ಸರ್ಕಾರಿ ಶಾಲೆಗೆ ಸೆಹಾಗಲ್. ಪೌಂಡೇಷನ್ ಮತ್ತು ಕೋಕಕೋಲ ಫೌಂಡೇಶನ್ ಸಹಯೋಗದಲ್ಲಿ ವಾಶ್ ಯೋಜನೆ ಅಡಿಯಲ್ಲಿ  ಶುದ್ಧ ಕುಡಿಯುವ ನೀರಿನ ಘಟಕ ಮತ್ತು ಕೈ ತೋಳೆಯ ಘಟಕದ ಸೌಲಭ್ಯ ನೀಡಿ  ಇಂದು  ಯೋಜನಾ ಅಧಿಕಾರಿಗಳಾದ  ರಮ್ಯಾ ಅವರು ಉದ್ಘಾಟಿಸಿದರು ಈ ಸಂದರ್ಭದಲ್ಲಿ ಗ್ರಾಮದ ಮುಖಂಡರು ಅರುಣ್ ರೆಡ್ಡಿ ಮಾತನಾಡಿ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಹಲವು ಸಂಘ ಸಂಸ್ಥೆಗಳು ಕೈಜೋಡಿಸುತ್ತಿರುವುದು ಸಂತೋಷ. ಅದೇ ರೀತಿಯಾಗಿ ನಾವು ಸಹ ನಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಸೇರಿಸಿ ಕನ್ನಡ ಭಾಷೆ ಹಾಗೂ ಶಾಲೆಗಳ ಉಳಿವಿಗೆ ಪಣತೊಡಬೇಕು. ಸರ್ಕಾರಿ ಶಾಲೆಯಲ್ಲಿ ನುರಿತ ಶಿಕ್ಷಕರಿಂದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ದೊರೆಯುತ್ತದೆ. ಸರ್ಕಾರದ ಸೌಲಭ್ಯಗಳು. ಮಕ್ಕಳಿಗೆ ಬಿಸಿ ಊಟ ಯೋಜನೆ. ರಾಗಿ ಮಾಲ್ಟ್. ಚಕ್ಕಿ. ಮೊಟ್ಟೆ ಸಮವಸ್ತ್ರ ವಿತರಣೆ. ಈ ರೀತಿಯಾಗಿ ನಾನಾ ಸೌಲಭ್ಯಗಳು ದೊರೆಯುತ್ತದೆ. ಇದನ್ನು ನಾವು ಸದ್ಬಳಕೆ ಮಾಡಿಕೊಳ್ಳಬೇಕು. ಸರ್ಕಾರಿ ಶಾಲೆಗಳನ್ನು ಕೀಲು ಮಟ್ಟದಲ್ಲಿ ನೋಡುವುದನ್ನು ಪೋಷಕರು ಮೊದಲು ತೆಗೆಯಬೇಕು. ಖಾಸಗಿ ಶಾಲೆಗಳಿಗಿಂತ ಇಲ್ಲಿ ಏನು ಕಡಿಮೆ ಇಲ್ಲ ಇದನ್ನು ನಾವು ಅರ್ಥ ಮಾಡಿಕೊಳ್ಳಬೇಕು ಎಂದು ಕಿವಿ ಮಾತು ಹೇಳಿದರು ಈ ಸಂದರ್ಭದಲ್ಲಿ ಮುಖ್ಯೋಪಾಧ್ಯಾಯರು ಮಂಜುಳ. ಗುತ್ತಿಗೆದಾರ ನಾಗರಾಜ್, ಗ್ರಾಮ ಪಂಚಾಯಿತಿ ಸದಸ್ಯರಾದ ಚಂದ್ರಶೇಖರ್ ನರೇಂದ್ರ ಬಾಬು ಗ್ರಾಮದ ಮುಖಂಡರು ಸದಾನಂದರೆಡ್ಡಿ ಅರುಣ್ ರೆಡ್ಡಿ  ಶಾಂತಮ್ಮ ಫೌಂಡೇಶನ್ ಶಿನು  ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0
suddikirana ಸುದ್ದಿ ಕಿರಣ ಟಿವಿ ಬಾಳಿನ ಬೆಳಕು ಕರ್ನಾಟಕದ ಮಾಹಿತಿ ಮನರಂಜನಾ ಚಾನೆಲ್ ಆಗಿದೆ. ಇದು ಮನರಂಜನೆಯ ಜೊತೆಗೆ ಇತ್ತೀಚಿನ ಸುದ್ದಿ ಮತ್ತು ಮಾಹಿತಿಯನ್ನು ವೀಕ್ಷಕರಿಗೆ ತೋರುತ್ತಿದೆ. ಮತ್ತು ಸಮಾಜವು ತೆಗೆದುಕೊಳ್ಳುವ ದಿಕ್ಕು ಮಾಹಿತಿಯಿಂದ ಪ್ರಭಾವಿತವಾಗಿರುತ್ತದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ಸುದ್ದಿ ಕಿರಣ ಟಿವಿ ಹಲವು ವಿಷಯಗಳಲ್ಲಿ ಪ್ರವರ್ತಕವಾಗಿದೆ. ಇದು ತನಿಖಾ ಪತ್ರಿಕೋದ್ಯಮ. ಮತ್ತು ತಾಂತ್ರಿಕ ಕೈಗಾರಿಕೆಗಳ ವೃತ್ತಿಪರರಿಂದ ಪ್ರಚಾರ ಮಾಡಲ್ಪಟ್ಟ ಚಾನೆಲ್ ಆಗಿದೆ. ಸುದ್ದಿ ಕಿರಣ ಟಿವಿ ಇತ್ತೀಚಿನ ತಂತ್ರಜ್ಞಾನಗಳೊಂದಿಗೆ ಗುಣಮಟ್ಟದ ಸಂಪನ್ಮೂಲಗಳನ್ನು ಸಂಯೋಜಿಸಲು ಪ್ರಯತ್ನಿಸುತ್ತದೆ. Chief Editor B.S.Mallikarjuna Reddy # 560, 3ನೇ ಮಹಡಿ, 1ನೇ ಮುಖ್ಯ ರಸ್ತೆ, ಯಶವಂತಪುರ ಬೆಂಗಳೂರು-560022., Email: suddikiranatv@gmail.com Email:suddikiranaa@gmail.com www.suddikirana.com ಸುದ್ದಿ ಮತ್ತು ಜಾಹೀರಾತಿಗಳಿಗಾಗಿ ಸಂಪರ್ಕಿಸಿ ಕಛೇರಿ 08041505268 ಸಂಚಾರಿ ವಾಣಿ 9686665456