ಸೊಳ್ಳೇಪುರ ಹಾಲು ಉತ್ಪಾದಕ ಸಹಕಾರ ಸಂಘ ಕಾಂಗ್ರೆಸ್ ವಷಕ್ಕೆ

Mar 2, 2026 - 13:04
Mar 2, 2026 - 17:22
 0  34
ಸೊಳ್ಳೇಪುರ ಹಾಲು ಉತ್ಪಾದಕ ಸಹಕಾರ ಸಂಘ ಕಾಂಗ್ರೆಸ್ ವಷಕ್ಕೆ
ಸುದ್ದಿ ಕಿರಣ ನ್ಯೂಸ್ ಡೆಸ್ಕ್

       ಕೃಷ್ಣರಾಜಪೇಟೆ ತಾಲ್ಲೂಕಿನ ಕಿಕ್ಕೇರಿ ಸಮೀಪದ ಸೊಳ್ಳೇಪುರ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ಐದು ವರ್ಷ ಅವದಿಯ ನಿರ್ದೇಶಕ ಸ್ಥಾನಕ್ಕೆ ಚುನಾವಣೆ ನಡೆಯಿತು.. ಕಾಂಗ್ರೆಸ್ ಪಕ್ಷ ಬೆಂಬಲಿತ 8 ಅಭ್ಯರ್ಥಿಗಳು ಮತ್ತು ಜೆ.ಡಿ.ಎಸ್ ಪಕ್ಷ ಬೆಂಬಲಿತ 8 ಅಭ್ಯರ್ಥಿಗಳು ಮತ್ತು ಪಕ್ಷೇತರ 1 ಅಭ್ಯರ್ಥಿ ಒಟ್ಟು 17 ಸದಸ್ಯರುಗಳು ಚುನಾವಣೆಯಲ್ಲಿ ಸ್ಪರ್ಧಿಸಿದ್ರು.. ಆದರೆ ಚುನಾವಣೆಯಲ್ಲಿ  6 ಸ್ಥಾನಗಳನ್ನು ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಜಯಸಾದಿಸಿ ಅಧಿಕಾರ ಚುಕ್ಕಾಣಿ ಹಿಡಿಯಲು ಯಶಸ್ವಿಯಾದರು, 2 ಸ್ಥಾನಗಳನ್ನು ಜೆ.ಡಿ.ಎಸ್ ಪಕ್ಷ ಬೆಂಬಲಿತ ಅಭ್ಯರ್ಥಿ ಗೆಲುವು ಸಾದಿಸಿದ್ರು..

ಇದೇ ಸಂದರ್ಭದಲ್ಲಿ ಕೆ.ಪಿ.ಸಿ.ಸಿ ಸದಸ್ಯರಾದ ಕಿಕ್ಕೇರಿ ಸುರೇಶ್ ಮಾತಮಾಡಿ ಕಳೆದ 40 ವರ್ಷಗಳಿಂದ ಸೊಳ್ಳೇಪುರ ಗ್ರಾಮದ ಹಾಲು ಉತ್ಪಾದಕ ಸಹಕಾರ ಸಂಘದಲ್ಲಿ ಚುನಾವಣೆ ನೆಡೆದಿಲ್ಲ ಗ್ರಾಮಸ್ಥರು ಎಲ್ಲಾರೂ ಒಂದಾಗಿ ಅವಿರೋಧವಾಗಿ ಆಯ್ಕೆ ಮಾಡುತ್ತಾ ಇದ್ದರು ಆದರೆ ಈ ಬಾರಿ ಚುನಾವಣೆ ನೆಡೆಬೇಕಾದ ಪರಿಸ್ಥಿತಿ ಎದರುರಾಗಿತ್ತು ಅದೇ ರೀತಿ ನಮ್ಮ 6 ಅಭ್ಯರ್ಥಿಗಳು ಭರ್ಜರಿ ಗೆಲುವು ಸಾದಿಸಿದ್ದಾರೆ ಅಲ್ಲದೆ 2 ಅಭ್ಯರ್ಥಿ ಬೆರಳೆಣಿಕೆಯ ಮತಗಳ ಅಂತರದಿಂದ ಸೋಲು ಕಂಡಿದ್ದಾರೆ ಮುಂದಿನ ದಿನಗಳನಲ್ಲಿ ಸಂಘದ ಎಲ್ಲಾ ನಿರ್ದೇಶಕರನ್ನು  ಒಗ್ಗೂಡಿಸಿಕೊಂಡು ಸಂಘದ ಅಭಿವೃದ್ಧಿಗೆ ಶ್ರಮಿಸುವಂತೆ ಸಲಹೆ ನೀಡಿ ನೂತನ ನಿರ್ದೇಶಕರನ್ನು ಸನ್ಮಾನಿಸಿ ಶುಭಕೋರಿದರು.

ಈ ಚುನಾವಣೆಗೆ ಶ್ರಮಿಸಿದ  ಮನ್ ಮುಲ್ ನಿರ್ದೇಶಕರಾದ ಡಾಲು ರವಿ, ಮತ್ತು  ಎಂ ಬಿ ಹರೀಶ್, ಕೆ.ಪಿ.ಸಿ.ಸಿ ಸದಸ್ಯರಾದ ಕಿಕ್ಕೇರಿ ಸುರೇಶ್, ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷರಾದ ಜಯರಾಮು ಮತ್ತು ಸಂಘದ ಷೇರುದಾರ  ಸಹಕಾರದಿಂದ 6 ಸ್ಥಾನಗಳು ಗೆಲುವುಗೆ ಕಾರಣವಾಗಿದೆ ಎಂದು ನೂತನ ನಿರ್ದೇಶಕರು ಧನ್ಯವಾದ ತಿಳಿಸಿದ್ರು..

ಈ ಸಂದರ್ಭದಲ್ಲಿ ಕೆ.ಪಿ.ಸಿ.ಸಿ ಸದಸ್ಯ ಕಿಕ್ಕೇರಿ ಸುರೇಶ್, ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಸೊಳ್ಳೇಪುರ ಜಯರಾಮು, ತಾಲ್ಲೂಕು ಯೂತ್ ಕಾಂಗ್ರೆಸ್ ಅಧ್ಯಕ್ಷ ಡಿ.ಎಂ ಮಹೇಂದ್ರ, ಕಿಕ್ಕೇರಿ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಕೆವೈ ಹರೀಶ್, ಮುಖಂಡರಾದ ರಮೇಶ್, ನೂತನ ಸದಸ್ಯರಾದ ಎಸ್ ಕೆ ನಾಗಣ್ಣ,  ಪಾಪಣ್ಣ, ಚಂದ್ರಶೇಖರ್, ಶಂಕರ, ಚಂದ್ರಶೇಖರ್, ಮಂಜುಳಾ ಕುಮಾರ್ , ಕಾರ್ಯದರ್ಶಿ ಸತ್ಯನಾರಾಯಣ, ಹಾಲು ಪರಿಶೀಲಕ ಜಿತೇಂದ್ರ ಸೇರಿದಂತೆ ಸೊಳ್ಳೇಪುರ ಗ್ರಾಮದ ಮುಖಂಡರುಗಳು ಇದ್ದರು..

What's Your Reaction?

Like Like 1
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0
suddikirana ಸುದ್ದಿ ಕಿರಣ ಟಿವಿ ಬಾಳಿನ ಬೆಳಕು ಕರ್ನಾಟಕದ ಮಾಹಿತಿ ಮನರಂಜನಾ ಚಾನೆಲ್ ಆಗಿದೆ. ಇದು ಮನರಂಜನೆಯ ಜೊತೆಗೆ ಇತ್ತೀಚಿನ ಸುದ್ದಿ ಮತ್ತು ಮಾಹಿತಿಯನ್ನು ವೀಕ್ಷಕರಿಗೆ ತೋರುತ್ತಿದೆ. ಮತ್ತು ಸಮಾಜವು ತೆಗೆದುಕೊಳ್ಳುವ ದಿಕ್ಕು ಮಾಹಿತಿಯಿಂದ ಪ್ರಭಾವಿತವಾಗಿರುತ್ತದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ಸುದ್ದಿ ಕಿರಣ ಟಿವಿ ಹಲವು ವಿಷಯಗಳಲ್ಲಿ ಪ್ರವರ್ತಕವಾಗಿದೆ. ಇದು ತನಿಖಾ ಪತ್ರಿಕೋದ್ಯಮ. ಮತ್ತು ತಾಂತ್ರಿಕ ಕೈಗಾರಿಕೆಗಳ ವೃತ್ತಿಪರರಿಂದ ಪ್ರಚಾರ ಮಾಡಲ್ಪಟ್ಟ ಚಾನೆಲ್ ಆಗಿದೆ. ಸುದ್ದಿ ಕಿರಣ ಟಿವಿ ಇತ್ತೀಚಿನ ತಂತ್ರಜ್ಞಾನಗಳೊಂದಿಗೆ ಗುಣಮಟ್ಟದ ಸಂಪನ್ಮೂಲಗಳನ್ನು ಸಂಯೋಜಿಸಲು ಪ್ರಯತ್ನಿಸುತ್ತದೆ. Chief Editor B.S.Mallikarjuna Reddy # 560, 3ನೇ ಮಹಡಿ, 1ನೇ ಮುಖ್ಯ ರಸ್ತೆ, ಯಶವಂತಪುರ ಬೆಂಗಳೂರು-560022., Email: suddikiranatv@gmail.com Email:suddikiranaa@gmail.com www.suddikirana.com ಸುದ್ದಿ ಮತ್ತು ಜಾಹೀರಾತಿಗಳಿಗಾಗಿ ಸಂಪರ್ಕಿಸಿ ಕಛೇರಿ 08041505268 ಸಂಚಾರಿ ವಾಣಿ 9686665456