ಸೋಸಲೆ ಶ್ರೀ ವ್ಯಾಸರಾಜ ಮಠದಲ್ಲಿ ಶಿವರಾತ್ರಿ ಮಹೋತ್ಸವ

Feb 16, 2026 - 15:46
 0  14
ಸೋಸಲೆ ಶ್ರೀ ವ್ಯಾಸರಾಜ ಮಠದಲ್ಲಿ ಶಿವರಾತ್ರಿ ಮಹೋತ್ಸವ

     ಬೆಂಗಳೂರು: ಪರಮಪೂಜ್ಯ ಶ್ರೀ ಶ್ರೀ ವಿದ್ಯಾಶ್ರೀಶತೀರ್ಥ ಶ್ರೀಪಾದಂಗಳವರ ಆದೇಶಾನುಸಾರ ಮಹಾಶಿವರಾತ್ರಿ ಪ್ರಯುಕ್ತ ಸುಬ್ರಹ್ಮಣ್ಯನಗರದ ಸೋಸಲೆ ಶ್ರೀ ವ್ಯಾಸರಾಜ ಮಠದಲ್ಲಿ ಬೆಳಗ್ಗೆ ವಿಶೇಷ ಪೂಜಾ ಕೈಂಕರ್ಯಗಳು ಜರುಗಿದವು.

 ಸಂಜೆಯ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಯುವ ಗಾಯಕ ಶ್ರೀ ಕೆ.ಪಿ. ಶಿಶಿರ್ ಅವರು ಅಪರೋಕ್ಷ ಜ್ಞಾನಿಗಳಿಂದ ರಚಿಸಲ್ಪಟ್ಟ ಹಲವಾರು ಅಪರೂಪದ ಹರಿದಾಸರ ಪದಗಳನ್ನು ತಾರತಮ್ಯೋಕ್ತವಾಗಿ ಮತ್ತು ಸುಶ್ರಾವ್ಯವಾಗಿ ಪ್ರಸ್ತುತಪಡಿಸಿದರು. ಇವರ ಗಾಯನಕ್ಕೆ ಕು|| ಸಂಸ್ಕೃತಿ ಬಾಣಾವರ ಹಾರ್ಮೋನಿಯಂ ವಾದನದಲ್ಲಿ ಹಾಗೂ ಶ್ರೀ ಅನಿರುದ್ಧ ಮೃದಂಗ ವಾದನದಲ್ಲಿ ಸಾಥ್ ನೀಡಿದರು.

ಮೆಮೆಂಟೋ ಶ್ರೀ ಕೆ.ಪಿ. ಶ್ರೀಧರ್ ಕಲಾವಿದರನ್ನು ಸನ್ಮಾನಿಸಿದರು. ಹರಿದಾಸ ಸಂಪದ ಟ್ರಸ್ಟಿನ ಗೌರವ ಕಾರ್ಯದರ್ಶಿ ಶ್ರೀ ಎಂ.ವಿ. ಮಧುಸೂದನ್ ವಂದನಾರ್ಪಣೆ ಮಾಡಿದರು. ಶ್ರೀಮಠದ ವಿಚಾರಣಾಕರ್ತರಾದ ಶ್ರೀ ಸೋಸಲೆ ಪ್ರಕಾಶ್ ಅವರು ಕಾರ್ಯಕ್ರಮಗಳನ್ನು ಅಚ್ಚುಕಟ್ಟಾಗಿ ವ್ಯವಸ್ಥೆ ಮಾಡಿದ್ದರು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0
suddikirana ಸುದ್ದಿ ಕಿರಣ ಟಿವಿ ಬಾಳಿನ ಬೆಳಕು ಕರ್ನಾಟಕದ ಮಾಹಿತಿ ಮನರಂಜನಾ ಚಾನೆಲ್ ಆಗಿದೆ. ಇದು ಮನರಂಜನೆಯ ಜೊತೆಗೆ ಇತ್ತೀಚಿನ ಸುದ್ದಿ ಮತ್ತು ಮಾಹಿತಿಯನ್ನು ವೀಕ್ಷಕರಿಗೆ ತೋರುತ್ತಿದೆ. ಮತ್ತು ಸಮಾಜವು ತೆಗೆದುಕೊಳ್ಳುವ ದಿಕ್ಕು ಮಾಹಿತಿಯಿಂದ ಪ್ರಭಾವಿತವಾಗಿರುತ್ತದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ಸುದ್ದಿ ಕಿರಣ ಟಿವಿ ಹಲವು ವಿಷಯಗಳಲ್ಲಿ ಪ್ರವರ್ತಕವಾಗಿದೆ. ಇದು ತನಿಖಾ ಪತ್ರಿಕೋದ್ಯಮ. ಮತ್ತು ತಾಂತ್ರಿಕ ಕೈಗಾರಿಕೆಗಳ ವೃತ್ತಿಪರರಿಂದ ಪ್ರಚಾರ ಮಾಡಲ್ಪಟ್ಟ ಚಾನೆಲ್ ಆಗಿದೆ. ಸುದ್ದಿ ಕಿರಣ ಟಿವಿ ಇತ್ತೀಚಿನ ತಂತ್ರಜ್ಞಾನಗಳೊಂದಿಗೆ ಗುಣಮಟ್ಟದ ಸಂಪನ್ಮೂಲಗಳನ್ನು ಸಂಯೋಜಿಸಲು ಪ್ರಯತ್ನಿಸುತ್ತದೆ. Chief Editor B.S.Mallikarjuna Reddy # 560, 3ನೇ ಮಹಡಿ, 1ನೇ ಮುಖ್ಯ ರಸ್ತೆ, ಯಶವಂತಪುರ ಬೆಂಗಳೂರು-560022., Email: suddikiranatv@gmail.com Email:suddikiranaa@gmail.com www.suddikirana.com ಸುದ್ದಿ ಮತ್ತು ಜಾಹೀರಾತಿಗಳಿಗಾಗಿ ಸಂಪರ್ಕಿಸಿ ಕಛೇರಿ 08041505268 ಸಂಚಾರಿ ವಾಣಿ 9686665456