ಸ್ವಾಮೀಜಿಯ ಮೇಲಿನ ಹಲ್ಲೆ ಖಂಡಿಸಿ ಪ್ರತಿಭಟನೆ: ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ
ಜಗಳೂರು: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಐಮಂಗಳ ಗ್ರಾಮದ ಶ್ರೀ ಬಸವ ಹರಳಯ್ಯ ಸ್ವಾಮೀಜಿಯವರ ಮೇಲೆ ನಡೆದಿರುವ ಮಾರಣಾಂತಿಕ ಹಲ್ಲೆಯನ್ನು ಖಂಡಿಸಿ ಜಗಳೂರು ತಾಲೂಕು ಮಾದಿಗ ಮಹಾಸಭಾ ಹಾಗೂ ವಿವಿಧ ದಲಿತ ಸಂಘಟನೆಗಳು ತಹಶೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದವು.
ಸೋಮವಾರ ಪಟ್ಟಣದ ತಾಲೂಕು ಕಚೇರಿ ಗೆ ಆಗಮಿಸಿ ತಮ್ಮ ಬೇಡಿಕೆಯ ಪಟ್ಟಿಯನ್ನು ತಹಶೀಲ್ದಾರ್ ಗೆ ನೀಡಿದರು
ಈ ವೇಳೆ ದಲಿತ ಮುಖಂಡ ಶಂಭುಲಿಂಗ ಮಾತನಾಡಿ ಸಮಾಜದ ಧಾರ್ಮಿಕ ಮುಖಂಡರಾದ ಶ್ರೀ ಬಸವ ಹರಳಯ್ಯ ಸ್ವಾಮೀಜಿಯವರ ಮೇಲೆ ನಡೆದಿರುವ ಹಲ್ಲೆ ಖಂಡನೀಯವಾಗಿದ್ದು, ಈ ಘಟನೆ ಸಮಾಜದಲ್ಲಿ ಆತಂಕದ ವಾತಾವರಣ ನಿರ್ಮಿಸಿದೆ ಎಂದರು
ಹಲ್ಲೆ ನಡೆಸಿದ ಆರೋಪಿಗಳನ್ನು ಕೂಡಲೇ ಬಂಧಿಸಿ, ಕಾನೂನು ಪ್ರಕಾರ ಕಠಿಣ ಕ್ರಮ ಕೈಗೊಳ್ಳಬೇಕು. ಆರೋಪಿಗಳ ಆಸ್ತಿ-ಪಾಸ್ತಿಗಳನ್ನು ಮುಟ್ಟುಗೋಲು ಹಾಕಿಕೊಂಡು, ಸಮಾಜದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನು ಸರ್ಕಾರ ಕೈಗೊಳ್ಳಬೇಕು ಎಂದು ಒತ್ತಾಯಿಸಲಾಗಿದೆ.
ಅಲ್ಲದೆ, ಶ್ರೀ ಬಸವ ಹರಳಯ್ಯ ಸ್ವಾಮೀಜಿಯವರಿಗೆ ಸೂಕ್ತ ಭದ್ರತೆ ಒದಗಿಸಿ, ಇಂತಹ ಘಟನೆಗಳು ಮರುಕಳಿಸದಂತೆ ಸರ್ಕಾರ ಪರಿಣಾಮಕಾರಿ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು
ಈ ಮನವಿಯನ್ನು ಸರ್ಕಾರಕ್ಕೆ ತಕ್ಷಣವೇ ರವಾನಿಸುವಂತೆ ತಹಶೀಲ್ದಾರ್ ಅವರಿಗೆ ಮನವಿ ಮಾಡಿಕೊಂಡರು.
ಸಂಧರ್ಭದಲ್ಲಿ ದಲಿತ ಮುಖಂಡರಾದ ಸತ್ಯಮೂರ್ತಿ , ರಾಜಶೇಖರ, ಮಲ್ಲೇಶ್ ,ರಾಜು ಸೇರಿದಂತೆ ಮತ್ತಿತರರು ಹಾಜರಿದ್ದರು.