ಸ್ವೀಪ್ ಸಮಿತಿ ವತಿಯಿಂದ ಮತದಾನ ಜಾಗೃತಿ ಜಾಥ-ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಭಾಗಿ  

ಸ್ವೀಪ್ ಸಮಿತಿ ವತಿಯಿಂದ ಮತದಾನ ಜಾಗೃತಿ ಜಾಥ-ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಭಾಗಿ  


ಬಾಗೇಪಲ್ಲಿ:ತಾಲ್ಲೂಕು ಸ್ವೀಪ್ ಸಮಿತಿ ವತಿಯಿಂದ ನಗರದ ಮುಖ್ಯ ರಸ್ತೆಗಳಲ್ಲಿ ಮತದಾನ ಜಾಗೃತಿ ಜಾಥಾ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಜಿಲ್ಲಾ ಪಂಚಾಯತಿ ಉಪಕಾರ್ಯದರ್ಶಿ ಭಾಸ್ಕರ್,ಬಾಗೇಪಲ್ಲಿ 140 ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿ ಸಂತೋಷ್,ತಹಸೀಲ್ದಾರ್ ಪ್ರಶಾಂತ್ ಕೆ.ಪಾಟೀಲ್, ಗುಡಿಬಂಡೆ ತಹಸೀಲ್ದಾರ್ ಮನೀಶ್ ಪತ್ರಿ,ತಾಲೂಕು ಪಂಚಾಯತಿ ಕಾರ್ಯನಿರ್ವಹಣಾಧಿಕಾರಿ ,ಹೇಮಾವತಿ ಹಾಗೂ ಪುರಸಭೆ ಮುಖ್ಯಧಿಕಾರಿ ಎಲ್.ಶಂಕರ್ ಸೇರಿದಂತೆ ಎಲ್ಲಾ ಜಿಲ್ಲಾ ತಾಲೂಕು ಮಟ್ಟದ ಅಧಿಕಾರಿಗಳು ಚಾಲನೆ ನೀಡಿದರು.ನಂತರ ಮಾತನಾಡಿದ ಜಿಲ್ಲಾ ಪಂಚಾಯತಿ ಪ್ರಕಾಶ್ ಜಿ ನಿಟ್ಟಾಲಿ ಮತದಾನ ಎಲ್ಲರಿಗೂ ದೊರೆತಿರುವ ಸಾಂವಿಧಾನಿಕ ಹಕ್ಕಾಗಿದ್ದು,ಬಲಿಷ್ಠ ಪ್ರಜಾಪ್ರಭುತ್ವಕ್ಕೆ ಎಲ್ಲರೂ ತಪ್ಪದೇ ಮತದಾನ ಮಾಡಬೇಕು. ಹಾಗೂ ಪ್ರಜಾಪ್ರಭುತ್ವ ಹಬ್ಬವಾದ ಮತದಾನದಲ್ಲಿ ಎಲ್ಲರೂ ಭಾಗಿಯಾಗಬೇಕು.ಯಾವುದೇ ಆಮಿಷಕ್ಕೆ ಒಳಗಾಗದೇ ಎಲ್ಲರೂ ಮತ ಚಲಾಯಿಸಬೇಕು.ಯಾರೂ ಮತದಾನ ಮಾಡುವುದನ್ನ ತಪ್ಪಿಸಬಾರದು ಎಂದು ತಿಳಿಸಿದರು.ಇದೇ ಸಂದರ್ಭದಲ್ಲಿ ಮತದಾನ ಪ್ರತಿಜ್ಞಾ ವಿಧಿಯನ್ನು ಸ್ವೀಕರಿಸಲಾಯಿತು.ಗೂಳೂರು ವೃತ್ತ ಹಾಗೂ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದವರೆಗೂ ಮತದಾರರಿಗೆ ಮತದಾನದ ಬಗ್ಗೆ ಅರಿವು ಮೂಡಿಸಲಾಯಿತು.ಕಾರ್ಯಕ್ರಮದಲ್ಲಿ ಗಾರುಡಿಗೊಂಬೆಗಳು ಹಾಗೂ ಎತ್ತಿನ ಬಂಡಿಗಳು,ತಮಟೆ ವಾದ್ಯಗಳ ಮೂಲಕ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆಯ ಮುಖಾಂತರ ಮತದಾನದ ಜಾಗೃತಿಜಾಥಾ ಹಮ್ಮಿಕೊಳ್ಳಲಾಗಿತ್ತು.ಈ ಸಂದರ್ಭದಲ್ಲಿ ತಹಸೀಲ್ದಾರ್ ಪ್ರಶಾಂತ್ ಕೆ.ಪಾಟೀಲ್, ಗುಡಿಬಂಡೆ ತಹಸೀಲ್ದಾರ್ ಪೊಲೀಸ್ ಇನ್ಸ್ಪೆಕ್ಟರ್ ಪ್ರಶಾಂತ್ ವರ್ಣಿ,ಸಿಡಿಪಿಒ ರಾಮಚಂದ್ರ,ಕ್ಷೇತ್ರ ಶಿಕ್ಷಣಾಧಿಕಾರಿ ತನುಜಾ,ಸರ್ಕಾರಿ ನೌಕರರ ಸಂಘದ ಗೌರವಧ್ಯಕ್ಷ ಹನುಮಂತ ರೆಡ್ಡಿ, ಸಮಾಜ ಕಲ್ಯಾಣ ಇಲಾಖೆ ನಾಗರಾಜು, ಸೇರಿದಂತೆ ತಾಲ್ಲೂಕ್ ಮಟ್ಟದ ಎಲ್ಲಾ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು...