ಹಳ್ಳಿಕೆರೆಹುಂಡಿ ಪಿಎಸಿಸಿ ಬ್ಯಾಂಕ್ ನಿರ್ದೇಶಕರ ಉಪಚುನಾವಣೆಯಲ್ಲಿ ಶಿವಸ್ವಾಮಿ ಎನ್ ಭರ್ಜರಿ ಗೆಲುವು 

Feb 20, 2026 - 10:45
Feb 20, 2026 - 11:16
 0  9
ಹಳ್ಳಿಕೆರೆಹುಂಡಿ ಪಿಎಸಿಸಿ ಬ್ಯಾಂಕ್ ನಿರ್ದೇಶಕರ ಉಪಚುನಾವಣೆಯಲ್ಲಿ ಶಿವಸ್ವಾಮಿ ಎನ್ ಭರ್ಜರಿ ಗೆಲುವು 

    ಸಂತೆಮರಹಳ್ಳಿ:  ಸಮೀಪದ ಹಳ್ಳಿಕೆರೆ ಹುಂಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರ ಖಾಲಿ ಇದ್ದ ಸಾಲಗಾರರಲ್ಲದ  ಒಂದು ಸ್ಥಾನಕ್ಕೆ ಆಡಳಿತ ಮಂಡಳಿ  ವತಿಯಿಂದ ಉಪ ಚುನಾವಣೆ ನಡೆಸಲಾಯಿತು.

ಮಂಗಳವಾರ ನಡೆದ ಪಿಎಸಿಸಿ ಬ್ಯಾಂಕ್ ನಿರ್ದೇಶಕರ ಚುನಾವಣೆಯಲ್ಲಿ ಶಿವಸ್ವಾಮಿ ಎನ್ 75 ಮತಗಳನ್ನು ಪಡೆದು ಜಯಗಳಿಸುವ ಮೂಲಕ ನೂತನ ಪಿಎಸಿಸಿ ಬ್ಯಾಂಕ್ ನಿರ್ದೇಶಕರಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣೆ ಅಧಿಕಾರಿ ನಾಗೇಶ್ ಘೋಷಣೆ ಮಾಡಿದರು .

ಇವರ ಪ್ರತಿ ಸ್ಪರ್ಧಿ ಮಲ್ಲೇಶ್ ಮೂರ್ತಿ 31 ಮತಗಳನ್ನು ಪಡೆದು ಸೋಲು ಅನುಭವಿಸಿದ್ದಾರೆ.

ಈ ಬಳಿಕ ನೂತನವಾಗಿ ನಿರ್ದೇಶಕರಾಗಿ ಆಯ್ಕೆಯಾದ ಶಿವಸ್ವಾಮಿ ಎನ್ ಮಾತನಾಡಿ ನನ್ನನ್ನು ಆಯ್ಕೆಯಾದ ಮಾಡಿದ ಎಲ್ಲರಿಗೂ ತುಂಬು ಹೃದಯದ ಧನ್ಯವಾದಗಳನ್ನ ಸಲ್ಲಿಸುತ್ತೇನೆ ಎಂದರು.

ಮುಂಬರುವ ಅವಧಿಯಲ್ಲಿ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಸಾಲ ಹಾಗೂ ಸ್ವ ಸಹಾಯ ಸಂಘಗಳಿಗೆ ಸಾಲ ನೀಡಿ ಎಲ್ಲರ ಹಿತಾ ಕಾಪಾಡುವಲ್ಲಿ ಕಾರ್ಯನಿರ್ವಹಿಸುವುದಾಗಿ ತಿಳಿಸಿದರು.

ಈ ಸಂದರ್ಭದಲ್ಲಿ  ಪಿಎಸಿ ಸಿ ಬ್ಯಾಂಕ್ ನ ಮುಖ್ಯ ನಿರ್ವಹಣಾಧಿಕಾರಿ ಶಿವಕುಮಾರ್ ಹಾಗೂ ಲೀಲಾ ಮಹದೇವಪ್ಪ, ಮಣಿ ರಾಜಶೇಖರ್, ಡಿ ಎಸ್ ರೇವಣ್ಣ ಉಪಸ್ಥಿತರಿದ್ದರು.

What's Your Reaction?

Like Like 2
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0
suddikirana ಸುದ್ದಿ ಕಿರಣ ಟಿವಿ ಬಾಳಿನ ಬೆಳಕು ಕರ್ನಾಟಕದ ಮಾಹಿತಿ ಮನರಂಜನಾ ಚಾನೆಲ್ ಆಗಿದೆ. ಇದು ಮನರಂಜನೆಯ ಜೊತೆಗೆ ಇತ್ತೀಚಿನ ಸುದ್ದಿ ಮತ್ತು ಮಾಹಿತಿಯನ್ನು ವೀಕ್ಷಕರಿಗೆ ತೋರುತ್ತಿದೆ. ಮತ್ತು ಸಮಾಜವು ತೆಗೆದುಕೊಳ್ಳುವ ದಿಕ್ಕು ಮಾಹಿತಿಯಿಂದ ಪ್ರಭಾವಿತವಾಗಿರುತ್ತದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ಸುದ್ದಿ ಕಿರಣ ಟಿವಿ ಹಲವು ವಿಷಯಗಳಲ್ಲಿ ಪ್ರವರ್ತಕವಾಗಿದೆ. ಇದು ತನಿಖಾ ಪತ್ರಿಕೋದ್ಯಮ. ಮತ್ತು ತಾಂತ್ರಿಕ ಕೈಗಾರಿಕೆಗಳ ವೃತ್ತಿಪರರಿಂದ ಪ್ರಚಾರ ಮಾಡಲ್ಪಟ್ಟ ಚಾನೆಲ್ ಆಗಿದೆ. ಸುದ್ದಿ ಕಿರಣ ಟಿವಿ ಇತ್ತೀಚಿನ ತಂತ್ರಜ್ಞಾನಗಳೊಂದಿಗೆ ಗುಣಮಟ್ಟದ ಸಂಪನ್ಮೂಲಗಳನ್ನು ಸಂಯೋಜಿಸಲು ಪ್ರಯತ್ನಿಸುತ್ತದೆ. Chief Editor B.S.Mallikarjuna Reddy # 560, 3ನೇ ಮಹಡಿ, 1ನೇ ಮುಖ್ಯ ರಸ್ತೆ, ಯಶವಂತಪುರ ಬೆಂಗಳೂರು-560022., Email: suddikiranatv@gmail.com Email:suddikiranaa@gmail.com www.suddikirana.com ಸುದ್ದಿ ಮತ್ತು ಜಾಹೀರಾತಿಗಳಿಗಾಗಿ ಸಂಪರ್ಕಿಸಿ ಕಛೇರಿ 08041505268 ಸಂಚಾರಿ ವಾಣಿ 9686665456