ಹಾಸನ ಜಿಲ್ಲಾಡಳಿತ ಕನ್ನಡ ರಾಜ್ಯೋತ್ಸವ ಪ್ರಶಸ್ತಿ
ಚನ್ನರಾಯಪಟ್ಟಣ: ಹಾಸನ ಜಿಲ್ಲಾಡಳಿತದಿಂದ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡ ಗಾಯಕ ಎಚ್ ಎಸ್ ಮಂಜುನಾಥ್. ಹಾಸನ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ ಆಯೋಜಿಸಿದ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಚನ್ನರಾಯಪಟ್ಟಣದ ಜಾನಪದ ಕಲಾವಿದ ಹಾಗೂ ಕನ್ನಡಪರ ಹೋರಾಟಗಾರ ಹಿರಿಬಿಳ್ತಿ ಗ್ರಾಮದ ಎಚ್ಎಸ್ ಮಂಜುನಾಥ್ ರವರನ್ನು ಹಾಸನ ಜಿಲ್ಲಾ ಮಂತ್ರಿ ಕೃಷ್ಣ ಭೈರೇಗೌಡರವರು ಸನ್ಮಾನಿಸಿ ಗೌರವಿಸಿದರು. ಇದೇ ಸಂದರ್ಭದಲ್ಲಿ ಸಂಸದರಾದ ಶ್ರೇಯಸ್ ಪಟೇಲ್, ಶಾಸಕರಾದ ಎಚ್ಪಿ ಸ್ವರೂಪ್, ಜಿಲ್ಲಾಧಿಕಾರಿ ಲತಾ ಕುಮಾರಿ, ಉಪವಿಭಾಗಾಧಿಕಾರಿ ಜಗದೀಶ್ ಗಂಗಣ್ಣನವರ್, ಸೇರಿದಂತೆ ಇತರರು ಹಾಜರಿದ್ದರು.
What's Your Reaction?
Like
1
Dislike
0
Love
0
Funny
0
Angry
0
Sad
0
Wow
0
