ಹುಲ್ಕೂರು ಗ್ರಾಮ ಪಂಚಾಯಿತಿ: ಹಂಗಳ ಗ್ರಾಮದಲ್ಲಿ ಕುಡಿಯುವ ನೀರಿನ ಅದಾಲತ್ ಕಾರ್ಯಕ್ರಮ 

May 20, 2026 - 16:28
 0  22
ಹುಲ್ಕೂರು ಗ್ರಾಮ ಪಂಚಾಯಿತಿ: ಹಂಗಳ ಗ್ರಾಮದಲ್ಲಿ ಕುಡಿಯುವ ನೀರಿನ ಅದಾಲತ್ ಕಾರ್ಯಕ್ರಮ 

      ಬೇತಮಂಗಲ: ಗ್ರಾಮೀಣ ಭಾಗದ ಜನರಿಗೆ ಶುದ್ಧ ಮತ್ತು ಸಮರ್ಪಕ ಕುಡಿಯುವ ನೀರು ಒದಗಿಸುವ ನಿಟ್ಟಿನಲ್ಲಿ ಹುಲ್ಕೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಂಗಳ ಗ್ರಾಮದಲ್ಲಿ ಇತ್ತೀಚೆಗೆ 'ಕುಡಿಯುವ ನೀರಿನ ಅದಾಲತ್ ಕಾರ್ಯಕ್ರಮವನ್ನು ಆಡಳಿತಾಧಿಕಾರಿ ಬಿ ಜಿ ನಾರಾಯಣ ಸ್ವಾಮಿ ನೇತೃತ್ವದಲ್ಲಿ ಆಯೋಜಿಸಲಾಗಿತ್ತು.

ಈ ವೇಳೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶ್ರೀನಿವಾಸ್ ಮೂರ್ತಿ ಮಾತನಾಡಿ, ಗ್ರಾಮದಲ್ಲಿ ಎದುರಾಗುತ್ತಿರುವ ನೀರಿನ ಸಮಸ್ಯೆಗಳಿಗೆ ತಕ್ಷಣದ ಪರಿಹಾರ ಕಂಡುಕೊಳ್ಳುವ ಮತ್ತು ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸುವ ಉದ್ದೇಶದಿಂದ ಕುಡಿಯುವ ನೀರಿನ ಅದಾಲತ್ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು. 

ಸಾರ್ವಜನಿಕರು ಕುಡಿಯುವ ನೀರನ್ನು ಪೋಲು ಮಾಡದೆ ಜವಾಬ್ದಾರಿಯಿಂದ ಮಿತವಾಗಿ ಬಳಸಬೇಕು ಕುಡಿಯುವ ನೀರಿನಲ್ಲಿ ವಾಹನಗಳನ್ನು ತೊಳೆಯಬಾರದು ಅಡುಗೆ ಕೋಣೆಯಲ್ಲಿ ತರಕಾರಿ ತೊಳೆಯಲು ಬಳಸಿದ ನೀರನ್ನು ಗಿಡ ಮರಗಳಿಗೆ ಹಾಕಬೇಕು ಎಂದು ಗ್ರಾಮಸ್ಥರಿಗೆ ತಿಳಿಸಿದರು. 

ಈ ವೇಳೆ ಗ್ರಾಮಸ್ಥರು ಮಾತನಾಡಿ, ಜಲ ಜೀವನ್ ಯೋಜನೆಯಡಿಯಲ್ಲಿ ಗ್ರಾಮದ ಹಲವು ಬೀದಿಗಳಲ್ಲಿ ಪೈಪ್‌ಲೈನ್‌ಗಳನ್ನು ಸರಿಯಾಗಿ ಅಳವಡಿಸದ ಕಾರಣ, ನಿರಂತರವಾಗಿ ನೀರು ಸೋರಿಕೆಯಾಗುತ್ತಿದೆ (ಲೀಕೇಜ್‌). ಇದರಿಂದಾಗಿ ಕುಡಿಯುವ ನೀರು ರಸ್ತೆ ಪಾಲಾಗುತ್ತಿದ್ದು, ಹಲವು ಮನೆಗಳಿಗೆ ಸರಿಯಾಗಿ ನೀರು ತಲುಪುತ್ತಿಲ್ಲ ಈಗಾಗಲೇ ನೀರು ಸೋರಿಕೆಯ ಬಗ್ಗೆ ಜಲಜೀವನ್ ಅಧಿಕಾರಿಗಳ ಗಮನಕ್ಕೆ ತಂದರು ದುರಸ್ಥಿ ಮಾಡಲಿಲ್ಲ ಕೂಡಲೇ ಗುತ್ತಿಗೆದಾರರು ಅಥವಾ ಸಂಬಂಧ ಪಟ್ಟ ಅಧಿಕಾರಿಗಳು ಎಚ್ಚೆತ್ತುಕೊಂಡು ನೀರು ಸೋರಿಕೆಯನ್ನು ಸರಿ ಪಡಿಸಬೇಕು ಮತ್ತು ನೂತನವಾಗಿ ನಿರ್ಮಿಸಿಕೊಂಡ ಮನೆಗಳಿಗೆ ಪೈಪ್ ಲೈನ್ಸ್ ಹಾಕಿಕೊಡಬೇಕು ಎಂದು ಗ್ರಾಮಸ್ಥರು ಮನವಿ ಮಾಡಿದರು. 

ಅಧಿಕಾರಿಗಳು ಗೈರು: ಸಾರ್ವಜನಿಕರ ಜಲಮೂಲ ಹಾಗೂ ಕುಡಿಯುವ ನೀರಿನ ಸಮಸ್ಯೆಗಳನ್ನು ಆಲಿಸಿ ಸ್ಥಳದಲ್ಲೇ ಪರಿಹಾರ ಒದಗಿಸುವ ಉದ್ದೇಶದಿಂದ ಹಮ್ಮಿಕೊಳ್ಳಲಾಗಿದ್ದ ಕುಡಿಯುವ ನೀರಿನ ಅದಾಲತ್ ಕಾರ್ಯಕ್ರಮಕ್ಕೆ ಜಲ ಜೀವನ್ ಯೋಜನೆಯ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ (AEE) ಶೈಲಜಾ ಅವರು ಗೈರು ಹಾಜರಾಗುವ ಮೂಲಕ ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

ಈ ಸಂದರ್ಭದಲ್ಲಿ ಪಿಡಿಒ ಶ್ರೀನಿವಾಸ್ ಮೂರ್ತಿ, ಮಾಜಿ ಗ್ರಾಪಂ ಅಧ್ಯಕ್ಷ ಸೊನ್ನಮ್ಮ ರಮೇಶ್, ಕಾರ್ಯದರ್ಶಿ ಕೃಷ್ಣ ಮೂರ್ತಿ, ಕರಾವಸೂಲಿಗಾರ ವೆಂಕಟ್ರಾಮ್, ಕಂದಾಯ ಇಲಾಖೆ ಅಧಿಕಾರಿ ಅಮರೇಶ್, ಬೆಸ್ಕಾಂ ಇಲಾಖೆ ಅಧಿಕಾರಿಗಳು, ಜೆಜೆಎಂ ಯೋಜನೆ ಗುತ್ತಿಗೆದಾರರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

ಚಿತ್ರ 01 ಹುಲ್ಕೂರು ಗ್ರಾಮ ಪಂಚಾಯಿತಿಯ ಹಂಗಳ ಗ್ರಾಮದಲ್ಲಿ ಕುಡಿಯುವ ನೀರಿನ ಅದಾಲತ್ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು.

ಚಿತ್ರ 02 ಜೆಜೆಎಂ ಯೋಜನೆಯಡಿಯಲ್ಲಿ ಅಳವಡಿಸಿಡ ಪೈಪ್ ಲೈನ್ ಗ್ರಾಮದ ಹಲವು ಬೀದಿಗಳಲ್ಲಿ ನೀರು ಸೋರಿಕೆಯಾಗುತ್ತಿರುವುದು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0
suddikirana ಸುದ್ದಿ ಕಿರಣ ಟಿವಿ ಬಾಳಿನ ಬೆಳಕು ಕರ್ನಾಟಕದ ಮಾಹಿತಿ ಮನರಂಜನಾ ಚಾನೆಲ್ ಆಗಿದೆ. ಇದು ಮನರಂಜನೆಯ ಜೊತೆಗೆ ಇತ್ತೀಚಿನ ಸುದ್ದಿ ಮತ್ತು ಮಾಹಿತಿಯನ್ನು ವೀಕ್ಷಕರಿಗೆ ತೋರುತ್ತಿದೆ. ಮತ್ತು ಸಮಾಜವು ತೆಗೆದುಕೊಳ್ಳುವ ದಿಕ್ಕು ಮಾಹಿತಿಯಿಂದ ಪ್ರಭಾವಿತವಾಗಿರುತ್ತದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ಸುದ್ದಿ ಕಿರಣ ಟಿವಿ ಹಲವು ವಿಷಯಗಳಲ್ಲಿ ಪ್ರವರ್ತಕವಾಗಿದೆ. ಇದು ತನಿಖಾ ಪತ್ರಿಕೋದ್ಯಮ. ಮತ್ತು ತಾಂತ್ರಿಕ ಕೈಗಾರಿಕೆಗಳ ವೃತ್ತಿಪರರಿಂದ ಪ್ರಚಾರ ಮಾಡಲ್ಪಟ್ಟ ಚಾನೆಲ್ ಆಗಿದೆ. ಸುದ್ದಿ ಕಿರಣ ಟಿವಿ ಇತ್ತೀಚಿನ ತಂತ್ರಜ್ಞಾನಗಳೊಂದಿಗೆ ಗುಣಮಟ್ಟದ ಸಂಪನ್ಮೂಲಗಳನ್ನು ಸಂಯೋಜಿಸಲು ಪ್ರಯತ್ನಿಸುತ್ತದೆ. Chief Editor B.S.Mallikarjuna Reddy # 560, 3ನೇ ಮಹಡಿ, 1ನೇ ಮುಖ್ಯ ರಸ್ತೆ, ಯಶವಂತಪುರ ಬೆಂಗಳೂರು-560022., Email: suddikiranatv@gmail.com Email:suddikiranaa@gmail.com www.suddikirana.com ಸುದ್ದಿ ಮತ್ತು ಜಾಹೀರಾತಿಗಳಿಗಾಗಿ ಸಂಪರ್ಕಿಸಿ ಕಛೇರಿ 08041505268 ಸಂಚಾರಿ ವಾಣಿ 9686665456