ಹೆಗ್ಗೋಠಾರ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ನೂತನ ನಿರ್ದೇಶಕರ ಆಯ್ಕೆ
ಚಾಮರಾಜನಗರ: ತಾಲೋಕಿನ ಹೆಗ್ಗೋಠಾರ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ನಿಯಮಿತ ವತಿಯಿಂದ ಮುಂಬರುವ 5 ವರ್ಷಗಳಿಗೆ ಆಡಳಿತ ಮಂಡಳಿ ವತಿಯಿಂದ ಹಾಲು ಉತ್ಪಾದಕರ ಆವರಣದಲ್ಲಿ ಚುನಾವಣೆ ನಡೆಸಲಾಯಿತು.
ಕಣದಲ್ಲಿ 25 ಅಭ್ಯರ್ಥಿಗಳು ಸ್ಪರ್ಧೆ ಮಾಡಿದ್ದೂ ಇದರಲ್ಲಿ 11 ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಜಯಗಳಿಸಿದ್ದು ಒಬ್ಬ ಅಭ್ಯರ್ಥಿ ಅವಿರೋಧವಾಗಿ ಆಯ್ಕೆಯಾಗುವ ಮುಕಾಂತರ ನೂತನ ಹಾಲು ಉತ್ಪಾದಕರ ಸಹಕಾರ ಸಂಘ ಆಡಳಿತ ಮಂಡಳಿಯನ್ನು ಕಾಂಗ್ರೆಸ್ ತನ್ನ ತೆಕ್ಕೆಗೆ ಪಡೆದುಕೊಂಡಿದೆ.
ಈ ಸಂದರ್ಭದಲ್ಲಿ ನೂತನ ನಿರ್ದೇಶಕರಾಗಿ ಆಯ್ಕೆಯಾದ ದುಂಡುಮಾದಯ್ಯ ಮಾತನಾಡಿ ಎಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘದ ಸದಸ್ಯರಿಗೆ ಅಭಿನಂದನೆಗಳನ್ನ ಸಲ್ಲಿಸುತ್ತೇನೆ ಎಂದರು.
ಈ ನಿಮ್ಮ ಸಹಕಾರದಿಂದ ಅತ್ಯುತ್ತಮವಾಗಿ ಹಾಲು ಉತ್ಪಾದಕರ ಸಹಕಾರ ಸಂಘದ ಅಭಿವೃದ್ಧಿಗೆ ಪೂರಕವಾಗಿ ದುಡಿಯುವುದರ ಜೊತೆಗೆ ರೈತರಿಗೆ ಸಕಲ ರೀತಿಯಲ್ಲಿ ಎಲ್ಲಾ ಸೌಲಭ್ಯನೀಡುವುದಾಗಿ ತಿಳಿಸಿದರು.
ರೈತರಿಗೆ ಹೈನುಗಾರಿಕೆಯಲ್ಲಿ ಮುಂದುವರಿಯಲು ಸಹಕಾರ ನೀಡುವುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ನಿರ್ದೇಶಕರಾದ ನಂಜುಂಡಸ್ವಾಮಿ, ಪುಟ್ಟಮಲ್ಲಪ್ಪ,ಗುರುಮಲ್ಲಪ್ಪ, ಮಲ್ಲೇಶ್, ಎಚ್ ಬಿ ಮಹೇಶ್,ಸುಬ್ಬಮ್ಮ, ಚಿನ್ನಮ್ಮ, ರಮೇಶ್, ಮಹೇಶ್ ಎಂ, ಪಾಪ ನಾಯಕ ಹಾಗೂ ರಿಟರ್ನಿಂಗ್ ಆಫೀಸರ್ ನಾಗೇಶ್ ಇದ್ದರು.
What's Your Reaction?
Like
2
Dislike
0
Love
0
Funny
0
Angry
0
Sad
0
Wow
0
