ಹೆಣ್ಣು ಮಕ್ಕಳ ರಕ್ಷಣೆ ನಮ್ಮೆಲರ ಕರ್ತವ್ಯ-ಶಾಲಾ ಮುಖ್ಯ ಶಿಕ್ಷಕಿ ರಾಮಸುಬ್ಬಮ್ಮ

ಹೆಣ್ಣು ಮಕ್ಕಳ ರಕ್ಷಣೆ ನಮ್ಮೆಲರ ಕರ್ತವ್ಯ-ಶಾಲಾ ಮುಖ್ಯ ಶಿಕ್ಷಕಿ ರಾಮಸುಬ್ಬಮ್ಮ

ಹೆಣ್ಣು ಮಕ್ಕಳ ರಕ್ಷಣೆ ನಮ್ಮೆಲರ ಕರ್ತವ್ಯ-ಶಾಲಾ ಮುಖ್ಯ ಶಿಕ್ಷಕಿ ರಾಮಸುಬ್ಬಮ್ಮ

ಬಾಗೇಪಲ್ಲಿ: ತಾಲ್ಲೂಕು ಕಸಬಾ ಹೋಬಳಿ  ಘಂಟಂವಾರಿಪಲ್ಲಿ ಸರ್ಕಾರಿ ಪ್ರೌಢಶಾಲೆಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಸಹಯೋಗದಲ್ಲಿ ಬೇಟಿ ಬಚಾವೋ ಬೇಟಿ ಪಡಾವೋ ಯೋಜನೆಯಡಿ ಹಮ್ಮಿಕೊಂಡ ರಾಷ್ಟ್ರೀಯ ಹೆಣ್ಣು ಮಕ್ಕಳ ಕಾನೂನು ಅರಿವು ನೆರವು ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿ ಮುಖ್ಯ ಶಿಕ್ಷಕಿ ರಾಮಸುಬ್ಬಮ್ಮ.ಜಿ ಮಾತನಾಡಿ ಹೆಣ್ಣು ಮಕ್ಕಳ ರಕ್ಷಣೆ ಹಾಗೂ ಅವರ ಶೈಕ್ಷಣಿಕ ಪ್ರಗತಿ ಉದ್ದೇಶದಿಂದ ಕೇಂದ್ರ ಹಾಗೂ ರಾಜ್ಯ ಸರ್ಕಾರ ಸಹಯೋಗದಲ್ಲಿ ಬೇಟಿ ಬಚಾವೋ ಬೇಟಿ ಪಡಾವೋ ಕಾರ್ಯಕ್ರಮ ಜಾರಿಗೆ ತರಲಾಗಿದೆ. ಭ್ರೂಣದಿಂದ ಹೆಣ್ಣು ಮಕ್ಕಳ ರಕ್ಷಣೆಯಾಗಬೇಕು, ಪ್ರಸ್ತುತ ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯ ಗಳಿಂದ ರಕ್ಷಣೆ ನೀಡಿ, ಅವರಿಗೆ ಸಮಾಜದಲ್ಲಿ ಉನ್ನತ ಸ್ಥಾನಮಾನ ಒದಗಿಸಿಕೊಡಲು ಶ್ರಮಿಸಬೇಕಿದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಅಸಾಂಸ್ಥಿಕ ಜಿಲ್ಲಾ ಮಕ್ಕಳು ರಕ್ಷಣಾಧಿಕಾರಿ ಗಾಯತ್ರಿ,ಶಿಕ್ಷಕರಾದ ಎನ್.ಎನ್.ಸಂಧ್ಯಾ,ಎನ್.ಜಂಗಮ ಶ್ರೀನಿವಾಸ್, ಸಿ.ನಾರಾಯಣ ಸ್ವಾಮಿ, ವರಲಕ್ಷ್ಮೀ, ಜಯಶ್ರೀ, ರಾಮಚಂದ್ರಪ್ಪ ಹಾಗೂ ಶಾಲಾ ಮಕ್ಕಳು ಹಾಜರಿದ್ದರು.